ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿಕ್ಕಮಗಳೂರು ಮನೆಯಲ್ಲೇ ಅಕ್ರಮ ಗಾಂಜಾ ಬೆಳೆದಿದ್ದ ಆರೋಪಿ ಅಂದರ್

ಚಿಕ್ಕಮಗಳೂರು: ಜಿಲ್ಲಾ ಅಬಕಾರಿ ಉಪ ಆಯುಕ್ತರ ಮಾರ್ಗದರ್ಶನದಲ್ಲಿ ಮೂಡಿಗೆರೆ ಅಬಕಾರಿ ಉಪ ಅಧೀಕ್ಷಕರ ನೇತೃತ್ವದಲ್ಲಿ ಮೂಡಿಗೆರೆ ಪಟ್ಟಣದ ಬೇಲೂರು ರಸ್ತೆಯ ಪೃಥ್ವಿ ಎಂ ಗೌಡ ಬಿನ್ ಮಹಿಪಾಲ್ ಎಂಬುವವರ ಮನೆಯಲ್ಲಿ ಅಕ್ರಮವಾಗಿ ಗಾಂಜಾ ಗಿಡವನ್ನು ಬೆಳೆದಿರುವುದನ್ನು ಪತ್ತೆ ಮಾಡಿ ದಾಳಿ ನಡೆಸಿದಾಗ ಸುಮಾರು 707 ಗ್ರಾಂ ತೂಕದ ಗಾಂಜಾವನ್ನು ವಶಕ್ಕೆ ಪಡೆದು ಆರೋಪಿಯನ್ನು ಎನ್ ಡಿ ಪಿ ಎಸ್ ಕಾಯ್ದೆಯಡಿ ಬಂಧಿಸಿ ಪ್ರಕರಣವನ್ನು ದಾಖಲಿಸಿ, ಆರೋಪಿಯನ್ನು ಚಿಕ್ಕಮಗಳೂರು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಲಯಕ್ಕೆ ಹಾಜರುಪಡಿಸಿ ನ್ಯಾಯಾಂಗಕ್ಕೆ ಬಂಧನಕ್ಕೆ ಒಪ್ಪಿಸಲಾಗಿದೆ. ಅಬಕಾರಿ ಉಪ ಅಧೀಕ್ಷಕರಾದ ಕೀರ್ತಿ ಕುಮಾರ್ , ಅಬಕಾರಿ ನಿರೀಕ್ಷಕರಾದ ಲೋಕೇಶ್ ಸಿಬ್ಬಂದಿಗಳಾದ ರಮೇಶ್ ತುಳಜಣ್ಣನವರ್, ಶಂಕರ ಗುರುವ, ಮತ್ತು ವಾಹನ ಚಾಲಕರಾದ ಪ್ರವೀಣ್ ಕಾರ್ಯಚರಣೆಯಲ್ಲಿ ಭಾಗಿಯಾಗಿದ್ದರು.

Edited By : PublicNext Desk
Kshetra Samachara

Kshetra Samachara

06/01/2025 08:05 pm

Cinque Terre

700

Cinque Terre

0

ಸಂಬಂಧಿತ ಸುದ್ದಿ