ಹಾವೇರಿ: ಉತ್ತರ ಕರ್ನಾಟಕದ ಆರಂಭಿಕ ಜಾತ್ರೆ ಎಂದೇ ಕರೆಯಲಾಗುವ ಹಾವೇರಿ ಹುಕ್ಕೇರಿ ಮಠದ ಜಾತ್ರೆ ರವಿವಾರದಿಂದ ಆರಂಭವಾಗಿದೆ. ಜಾತ್ರೆಯ ಎರಡನೇ ದಿನ ಜಾನುವಾರು ಜಾತ್ರೆಗೆ ಚಾಲನೆ ನೀಡಲಾಯಿತು.
ರಾಜ್ಯದಲ್ಲಿಯೇ ದೊಡ್ಡ ಮಾರುಕಟ್ಟೆಯಾಗಿರುವ ಹಾವೇರಿಯಲ್ಲಿ ವರ್ಷದ 365 ದಿನಗಳೂ ಜಾನುವಾರು ಸಿಗುತ್ತವೆ. ಕಳೆದ 54 ವರ್ಷಗಳಿಂದಲೂ ಹುಕ್ಕೇರಿ ಮಠ ಜಾನುವಾರು ಜಾತ್ರೆ ಆಯೋಜಿಸುತ್ತಾ ಬರುತ್ತಿದೆ.
ಪ್ರಸ್ತುತ ವರ್ಷ ಜಾನುವಾರುಗಳಿಗೆ ಮತ್ತೆ ಚರ್ಮಗಂಟು ರೋಗ ಕಾಣಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ಜಾನುವಾರುಗಳಿಗೆ ಚರ್ಮ ಗಂಟುರೋಗ ಲಸಿಕೆ ಹಾಕಿಸುವ ಮೂಲಕ ಜಾನುವಾರು ಜಾತ್ರೆಗೆ ಚಾಲನೆ ನೀಡಲಾಯಿತು. ಹುಕ್ಕೇರಿ ಮಠದ ಸದಾಶಿವ ಶ್ರೀಗಳು ವಿನೂತನ ಅರ್ಥಪೂರ್ಣ ಜಾನುವಾರು ಜಾತ್ರೆಗೆ ಚಾಲನೆ ನೀಡಿದರು.
PublicNext
06/01/2025 10:18 pm