ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸುಳ್ಯ: ಬಸ್ ನಿಲ್ದಾಣದ ಶೌಚಾಲಯದಲ್ಲಿದ್ದ ಮಹಿಳೆಯ ಫೋಟೊ ತೆಗೆದ ಕಿಡಿಗೇಡಿ

ಸುಳ್ಯ,: ಸುಳ್ಯ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಮಹಿಳಾ ಶೌಚಾಲಯದ ಹೊರಗಿ ನಿಂದ ಶೌಚಾಲಯದಲ್ಲಿ ಮಹಿಳೆಯೊಬ್ಬರು ಇದ್ದಾಗ ಕಿಟಕಿ ಮೂಲಕ ಯಾರೋ ಫೋಟೊ ತೆಗೆದು ಪರಾರಿಯಾಗಿರುವ ಘಟನೆ ನಡೆದಿದೆ.

ಮಹಿಳೆ ಶೌಚಾಲಯಕ್ಕೆ ಹೋಗಿದ್ದಾಗ ಹಿಂಬದಿಯಲ್ಲಿರುವ ಕಿಟಕಿಯ ಮೂಲಕ ಫೋಟೊ ತೆಗೆದಿರುವುದಾಗಿ ಮಹಿಳೆ ಆರೋಪಿಸಿದ್ದಾರೆ. ಈ ಭಾಗದ ಕಿಟಕಿಯ ಗ್ಲಾಸ್ ಸರಿದಿದ್ದು ಅಲ್ಲಿಂದ ಫೋಟೊ ಕ್ಲಿಕ್ಕಿಸಿದ್ದಾನೆ. ಮಹಿಳೆ ಈ ಘಟನೆಯನ್ನು ಮತ್ತು ಆತನ ಕೈಯನ್ನು ನೋಡಿ ಜೋರಾಗಿ ಕಿರುಚಿಕೊಂಡಾಗ ಆತ ಅಲ್ಲಿಂದ ಪರಾರಿಯಾಗಿದ್ದಾನೆ.

ಬಳಿಕ ಮಹಿಳೆ ಸುಳ್ಯ ಠಾಣೆಗೆ ತೆರಳಿ ದೂರು ನೀಡಿದ್ದು ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಈ ಬಗ್ಗೆ ಬಸ್ ನಿಲ್ದಾಣದ ಸಿಬ್ಬಂದಿಯನ್ನು ಠಾಣೆಗೆ ಕರೆಸಿ ಪೊಲೀಸರು ವಿಚಾರಣೆ ನಡೆಸಿದ್ದು ಶೌಚಾಲಯದ ಭಾಗದ ಅವ್ಯವಸ್ಥೆಯನ್ನು ಶೀಘ್ರವಾಗಿ ಸರಿಪಡಿಸುವಂತೆ ಸೂಚನೆ ನೀಡಿದ್ದಾರೆ.

Edited By : PublicNext Desk
Kshetra Samachara

Kshetra Samachara

06/01/2025 10:22 pm

Cinque Terre

4.8 K

Cinque Terre

0