ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೇಲೂರು: ಬಸ್ ನಿಲ್ದಾಣದ ಅವ್ಯವಸ್ಥೆ ಬಗ್ಗೆ ಶಾಸಕ ಎಚ್.ಕೆ ಸುರೇಶ್ ಅಸಮಾಧಾನ

ಬೇಲೂರು: ಬಸ್ ನಿಲ್ದಾಣದ ಅವ್ಯವಸ್ಥೆಯ ಬಗ್ಗೆ ವ್ಯಾಪಕವಾಗಿ ದೂರು ಬಂದ ಹಿನ್ನಲೆಯಲ್ಲಿ ಶಾಸಕ ಹೆಚ್ ಕೆ ಸುರೇಶ್ ಭೇಟಿ ನೀಡಿ ಡಿಪೋ ವ್ಯವಸ್ಥಾಪಕರ ವಿರುದ್ಧ ಹರಿಹಾಯ್ದರು.

ಇತ್ತೀಚಿನ ದಿನಗಳಲ್ಲಿ ಬಸ್ ನಿಲ್ದಾಣದ ಅವ್ಯವಸ್ಥೆ ,ಶೌಚಲಯದ ಅವ್ಯವಸ್ಥೆ ಹಾಗೂ ಬಸ್ ನಿಲ್ದಾಣದಲ್ಲಿ ಸ್ವಚ್ಚತೆ ಇಲ್ಲದಿರುವುದು ಹಾಗೂ ಸರಿಯಾದ ಸಮಯಕ್ಕೆ ಬಸ್ ಗಳ ವ್ಯವಸ್ಥೆ ಮಾಡದೆ ಇರುವ ಬಗ್ಗೆ ವರದಿಗಳು ಬಂದ ಹಿನ್ನಲೆ ಇಂದು ದಿಡೀರನೆ ಭೇಟಿ ನೀಡಿದ ಶಾಸಕರು ಅಲ್ಲಿಯ ಅವ್ಯವಸ್ಥೆ ಕಂಡು ಕಿಡಿಕಾರಿದರಲ್ಲದೆ ಇಷ್ಟೆಲ್ಲಾ ಅವ್ಯವಸ್ಥೆಗೆ ಕಾರಣವಾಗಿರುವ ಅಧಿಕಾರಿಗಳ ತಲೆದಂಡ ಮಾಡಲು ಹಾಗೂ ಸಾರ್ವಜನಿಕರ ಜೊತೆ ಸ್ಪಂದಿಸದ ಡಿಪೋ ಮ್ಯಾನೇಜರ್ ಅವರನ್ನು ಕೂಡಲೆ ಚರ್ಗಾವಣೆ ಮಾಡುವಂತೆ ಮಾನ್ಯ ಸಾರಿಗೆ ಸಚಿವರಿಗೆ ಮನವಿ ಮಾಡಲಾಗುವುದು ಎಂದು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಈ ವೇಳೆ ಬಸ್ ನಿಲ್ದಾಣದ ಅವ್ಯವಸ್ಥೆಯ ಬಗ್ಗೆ ಸ್ವತ ಅವರೇ ಪರಿಶೀಲಿಸಿ ಮಾತನಾಡಿದ ಅವರು ಬೇಲೂರು ವಿಶ್ವಪ್ರಸಿದ್ದ ತಾಣವಾಗಿದೆ ಆದರೆ ಇಲ್ಲಿಗೆ ಬಂದ ಪ್ರವಾಸಿಗರು ಬಸ್ ನಿಲ್ದಾಣದ ಅವ್ಯವಸ್ಥೆಬಗ್ಗೆ ಹಾಗೂ ಸಾರ್ವಜನಿಕರು ಪ್ರತಿನಿತ್ಯ ಜನಪ್ರತಿನಿಧಿಗಳಿಗೆ ಹಿಡಿಶಾಪ ಹಾಕುತ್ತಿದ್ದಾರೆ.ಇಂತಹ ಅಧಿಕಾರಿಗಳಿಂದಾಗಿ ನಾವು ತಲೆತಗ್ಗಿಸುವ ಪರಿಸ್ಥಿತಿ ಉಂಟಾಗಿದೆ. ಸುಮಾರು 1 ತಿಂಗಳಿಂದ ಶೌಚಾಲಯದಲ್ಲಿ ನೀರಿನ ವ್ಯವಸ್ಥೆ ಇಲ್ಲ ಹಾಗೂ ಬರುಬಂತ ಪ್ರಯಾಣಿಕರಿಗೆ ಕುಡಿಯುವ ನೀರಿನ ವ್ಯವಸ್ಥೆ ಇಲ್ಲ.ಹಾಗೂ ಸರಿಯಾದ ಸಮಯಕ್ಕೆ ಬಸ್ ವ್ಯವಸ್ಥೆ ನೀಡುತ್ತಿಲ್ಲ ಎಂಬ ದೂರಿನ ಹಿನ್ನಲೆ ಇವರಿಗೆ ಹಲವಾರು ಬಾರಿ ಡಿಪೊ ಮ್ಯಾನೇಜರ್ ಶಾಜೀಯಭಾನು ಅವರಿಗೆ ಮಾಹಿತಿ ನೀಡಿದರೂ ಇದರ ಬಗ್ಗೆ ತಲೆ ಕೆಡಿಸಿಕೊಂಡಿಲ್ಲ.ಶೌಚಾಲಯದಿಂದ ರೋಗ ಹರಡಿದರೆ ಇದಕ್ಕೆ ಯಾರು ಹೊಣೆ,ನಿಗದಿತ ಸಮಯಕ್ಕೆ ಸರಿಯಾಗಿ ಬಸ್ ಗಳು ಬಾರದ ಹಿನ್ನಲೆ ವಿದ್ಯಾರ್ಥಿಗಳು ಹಾಗೂ ಹೊರಗೆ ಹೋಗುವ ಸರ್ಕಾರಿ ನೌಕರರಿಗೆ ತೊಂದರೆಯಾಗುತ್ತಿದೆ.ಇದಕ್ಕೆನೇರ ಹೊಣೆ ಕೆಎಸ್ ಆರ್ ಟಿ ಸಿ ಅಧಿಕಾರಿಗಳೆ ಕಾರಣ.ಇಷ್ಟೆಲ್ಲಾ ಲೋಪ ದೋಷಗಳಾಗಿದ್ದರೂ ನಮ್ಮ ಗಮನಕ್ಕೆ ತಂದಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

Edited By : PublicNext Desk
PublicNext

PublicNext

06/01/2025 10:29 pm

Cinque Terre

20 K

Cinque Terre

0