ಕೊರಟಗೆರೆ: ಕಾರು ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಸೋಮವಾರ ತಾಲೂಕಿನ ಮಧುಗಿರಿ-ತುಮಕೂರು ಮುಖ್ಯ ರಸ್ತೆಯ ಕಾಮೇನಹಳ್ಳಿ ಗ್ರಾಮದ ಬಳಿ ನಡೆದಿದೆ.
ಮೃತರನ್ನು ತಾಲೂಕಿನ ಹೊಳವನಹಳ್ಳಿಯ ಪ್ರವೀಣ್ (20) ಮತ್ತು ಹರ್ಷಿತ್ (24) ಎಂದು ಗುರುತಿಸಲಾಗಿದೆ. ಸ್ನೇಹಿತರೊಂದಿಗೆ ಗೋವಾಕ್ಕೆ ತೆರಳಿ ಹಿಂದಿರುಗುವಾಗ ಅಪಘಾತ ಸಂಭವಿಸಿದೆ. ಕೊರಟಗೆರೆ ಪಿಎಸ್ಐ ಚೇತನ್ ಮತ್ತು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ದೂರು ದಾಖಲಿಸಿಕೊಂಡು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
PublicNext
06/01/2025 10:36 pm