ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸಿದ್ದಾಪುರ: ತಾಲೂಕಿನಲ್ಲಿ ನೂತನವಾಗಿ ನಿರ್ಮಾಣಗೊಂಡ ಅಂಗನವಾಡಿಗಳ ಉದ್ಘಾಟಿಸಿದ ಶಾಸಕ ಭೀಮಣ್ಣ

ಸಿದ್ದಾಪುರ: ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕರಾದ ಭೀಮಣ್ಣ ನಾಯ್ಕ ಸೋಮವಾರ ತಾಲೂಕಿನ ವಿವಿದೆಡೆ ನಿರ್ಮಾಣವಾದ ನೂತನ ಅಂಗನವಾಡಿ ಕೇಂದ್ರಗಳನ್ನು ಉದ್ಘಾಟಿಸಿದರು.

ತಾಲೂಕಿನ ಕೋಲಶಿರ್ಸಿ ಗ್ರಾಪಂ ವ್ಯಾಪ್ತಿಯ ಹೆಗ್ಗೋಡಮನೆ, ಹಲಗೇರಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಹೆಮಗಾರ, ಕಾವಂಚೂರು ಗ್ರಾಪಂ ವ್ಯಾಪ್ತಿಯ ಕಲ್ಲೂರು ಹಾಗೂ ಮನಮನೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಹಸುವಂತೆ ಅಂಗನವಾಡಿ ಕೇಂದ್ರವನ್ನು ಉದ್ಘಾಟಿಸಿ ಶಾಲಾ ಪೂರ್ವ ಶಿಕ್ಷಣವನ್ನು ಮಕ್ಕಳಿಗೆ ಸರಿಯಾಗಿ ನೀಡುವುದರ ಜತೆಗೆ ಸರ್ಕಾರದಿಂದ ನೀಡಲಾಗುವ ಪೌಷ್ಠಿಕ ಆಹಾರವನ್ನು ಕಾಲಕಾಲಕ್ಕೆ ನೀಡಿ ಅಪೌಷ್ಠಿಕತೆಯಿಂದ ದೂರ ಮಾಡಿ ಎಂದು ಕರೆ ನೀಡಿದರು.

 ಈ ಸಂದರ್ಭದಲ್ಲಿ ಗ್ರಾಪಂ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರು ಹಾಜರಿದ್ದರು.

Edited By : PublicNext Desk
Kshetra Samachara

Kshetra Samachara

06/01/2025 10:41 pm

Cinque Terre

1.96 K

Cinque Terre

0

ಸಂಬಂಧಿತ ಸುದ್ದಿ