ಉಳ್ಳಾಲ: ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಮೆಡಿಕಲ್ ಶಾಪ್ ಮಾಲೀಕ ದಾರುಣವಾಗಿ ಮೃತಪಟ್ಟ ಘಟನೆ ನಾಟೆಕಲ್ ಸಮೀಪದ ತಿಬ್ಲಪದವು ಎಂಬಲ್ಲಿ ಸೋಮವಾರ ನಡೆದಿದೆ.
ದೇರಳಕಟ್ಟೆ ನಿವಾಸಿ, ಹಾಜಿರಾ ಮೆಡಿಕಲ್ ಶಾಪ್ ಮಾಲೀಕ ಅವ್ಸಾಫ್(25) ಮೃತಪಟ್ಟ ದುರ್ದೈವಿ. ಸೋಮವಾರ ಮಧ್ಯಾಹ್ನ ಅವ್ಸಾಫ್ ದೇರಳಕಟ್ಟೆಯಿಂದ ತಿಬ್ಲಪದವು ಕಡೆಗೆ ಬೈಕ್‌ನಲ್ಲಿ ಸಂಚರಿಸುತ್ತಿದ್ದರು. ತಿಬ್ಲಪದವಿಗೆ ಬರುತ್ತಿದ್ದಂತೆ ಡಿವೈಡರ್ ಸಮೀಪ ಲಾರಿಯೊಂದು ಹಠಾತ್ತನೆ ತಿರುಗಿದ ಪರಿಣಾಮ ಲಾರಿ ಹಿಂಬದಿಗೆ ಬೈಕ್ ಡಿಕ್ಕಿ ಹೊಡೆದು ಅವ್ಸಾಫ್ ಮೃತಪಟ್ಟಿದ್ದಾರೆ.
ಕೆಲ ವರ್ಷಗಳ ಹಿಂದಷ್ಟೇ ಕಲಿಕೆ ಮುಗಿಸಿ ಅವ್ಸಾಫ್ ದೇರಳಕಟ್ಟೆ ಜಂಕ್ಷನ್‌ನಲ್ಲಿ ಮೆಡಿಕಲ್ ಶಾಪ್ ನಡೆಸುತ್ತಿದ್ದರು. ಮಂಗಳೂರು ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆಯ ಭೀಕರ ದೃಶ್ಯ ಸ್ಥಳೀಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
PublicNext
06/01/2025 11:05 pm