ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ಸ್ನಾನ ಮಾಡುತ್ತಿದ್ದ ಅಪ್ರಾಪ್ತೆಯ ವೀಡಿಯೊ ಚಿತ್ರೀಕರಿಸಿದ ಅಪರಾಧಿಗೆ ಜೈಲು ಶಿಕ್ಷೆ

ಮಂಗಳೂರು: ಶೌಚಗೃಹದಲ್ಲಿ ಸ್ನಾನ ಮಾಡುತ್ತಿದ್ದ ಅಪ್ರಾಪ್ತೆಯ ವೀಡಿಯೊ ಚಿತ್ರೀಕರಣ ಮಾಡಿರುವ ಆರೋಪ ಸಾಬೀತಾಗಿರುವ ಹಿನ್ನೆಲೆಯಲ್ಲಿ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (ಪೊಕ್ಸೊ) ಎಫ್‌ಟಿಎಸ್‌ಸಿ-1 ನ್ಯಾಯಾಲಯದ ಕಾಮುಕನಿಗೆ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.

2024ರ ಮಾ.10ರಂದು ಬಜ್ಪೆ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿತ್ತು. ರಾತ್ರಿ 8:45ರ ಸುಮಾರಿಗೆ ಬಾಲಕಿ ತನ್ನ ಮನೆಯ ಶೌಚಗೃಹದಲ್ಲಿ ಸ್ನಾನ ಮಾಡುತ್ತಿದ್ದಳು. ಈ ವೇಳೆ ಆರೋಪಿ ಗಗನ್ (24) ಮೊಬೈಲ್‌ನಲ್ಲಿ ವೀಡಿಯೊ ಚಿತ್ರೀಕರಣ ಮಾಡಿದ್ದ. ಮೊಬೈಲ್ ಲೈಟ್ ಕಂಡು ಬಾಲಕಿ ಬೊಬ್ಬೆ ಹೊಡೆದಾಗ ಆಕೆಯ ತಾಯಿ ಬಂದಿದ್ದರು. ಈ ವೇಳೆ ಆರೋಪಿ ಓಡಿ ತಪ್ಪಿಸಿಕೊಂಡಿದ್ದಾನೆ.

ಈ ಬಗ್ಗೆ ಬಜ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಎಸ್ಸೈಗಳಾದ ಗುರಪ್ಪ ಕಾಂತಿ ಮತ್ತು ರೇವಣ್ಣ ಸಿದ್ದಪ್ಪ ಜಿ. ತನಿಖೆ ನಡೆಸಿದ್ದರು. ಎಸ್ಸೈ ಸತೀಶ್ ಕೆ.ಎಸ್. ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.

ಪ್ರಕರಣ ನಡೆದು ಕೇವಲ 9 ತಿಂಗಳಿನಲ್ಲೇ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (ಪೋಕ್ಸ್‌) ಎಫ್‌ಟಿಎಸ್‌ಸಿ-1 ನ್ಯಾಯಾಲಯದ ನ್ಯಾಯಾಧೀಶ ವಿನಯ್ ದೇವರಾಜ್ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ. ಐಪಿಸಿ ಸೆಕ್ಷನ್ 354 (ಸಿ) ಅಡಿಯಲ್ಲಿ ಆರೋಪಿಗೆ 1ವರ್ಷ ಸಾದಾ ಸಜೆ, 20,000 ರೂ. ದಂಡ ವಿಧಿಸಲಾಗಿದೆ. ದಂಡ ಪಾವತಿಸಲು ತಪ್ಪಿದರೆ ಹೆಚ್ಚುವರಿ 3 ತಿಂಗಳ ಸಾದಾ ಶಿಕ್ಷೆ ಅನುಭವಿಸಲು ಸೂಚಿಸಿದೆ. ದಂಡದ ಮೊತ್ತದಲ್ಲಿ 10,000 ರೂ.ವಲ್ಲದೆ ಪ್ರತ್ಯೇಕವಾಗಿ 1ಲ.ರೂ.ಗಳನ್ನು ನೊಂದ ಬಾಲಕಿಗೆ ಪರಿಹಾರವಾಗಿ ನೀಡುವಂತೆ ನ್ಯಾಯಾಧೀಶರು ಕಾನೂನು ಸೇವಾ ಪ್ರಾಧಿಕಾರಕ್ಕೆ ನಿರ್ದೇಶನ ನೀಡಿದ್ದಾರೆ.

ಪ್ರಾಸಿಕ್ಯೂಷನ್‌ ಪರವಾಗಿ ವಿಶೇಷ ಸರಕಾರಿ ಅಭಿಯೋಜಕಿ ಸಹನಾದೇವಿ ಬೋಳೂರು ವಾದಿಸಿದ್ದರು.

Edited By : Nagaraj Tulugeri
PublicNext

PublicNext

07/01/2025 10:38 am

Cinque Terre

33.25 K

Cinque Terre

2