ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹೊಸನಗರ: 60 ಅಡಿ ಆಳದ ಪ್ರಪಾತಕ್ಕೆ ಉರುಳಿದ ಬಸ್ - ಹುಲಿಕಲ್ ಘಾಟ್‌ನಲ್ಲಿಘಟನೆ !

ಹೊಸನಗರ: ತಾಲೂಕಿನ ಹುಲಿಕಲ್ ಘಾಟ್ ರಸ್ತೆ ತಿರುವಿನಲ್ಲಿ ಸಂಚರಿಸುತ್ತಿದ್ದ ಬಸ್ ಬ್ರೇಕ್ ಫೈಲ್ ಆಗಿ ಸುಮಾರು 60 ಅಡಿ ಆಳದ ಪ್ರಪಾತಕ್ಕೆ ಉರುಳಿದೆ.

ದಾವಣಗೆರೆಯಿಂದ ಮಂಗಳೂರು ಮಧ್ಯೆ ಸಂಚರಿಸುತ್ತಿದ್ದ ಖಾಸಗಿ ಬಸ್ ಭಾನುವಾರ ರಾತ್ರಿ 1.45 ಗಂಟೆಗೆ ಘಾಟಿ ರಸ್ತೆಯ ಶಿವಮೊಗ್ಗ ಜಿಲ್ಲೆ ಗಡಿ ಭಾಗದ ತಿರುವಿನಲ್ಲಿ ಬ್ರೇಕ್ ಫೈಲ್ ಆಗಿದ್ದು ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಪ್ರಪಾತಕ್ಕೆ ಉರುಳಿದೆ.

ಬಸ್ ನಲ್ಲಿ ಒಟ್ಟು 45 ಮಂದಿ ಪ್ರಯಾಣಿಕರಿದ್ದರು. ಹಲವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಾಯಾಳುಗಳನ್ನು ಕುಂದಾಪುರ ಆಸ್ಪತ್ರೆಗೆ ದಾಖಲಿಸಲಾಗಿದೆ.

ರಸ್ತೆಯ ಎರಡೂ ಬದಿ ಯಾವುದೇ ತಡೆಗೋಡೆ ಇಲ್ಲ. ರಸ್ತೆ ಬದಿ ಮಣ್ಣು ಹಾಕಿ ಎತ್ತರಿಸಲಾಗಿದ್ದು, ಬದಿಗೆ ಅಳವಡಿಸಿರುವ ಕಬ್ಬಿಣದ ಪಟ್ಟಿಗಳು ಮುಚ್ಚಿಹೋಗಿವೆ. ಇದರಿಂದ ಹೆಚ್ಚಿನ ಅಪಘಾತ ಸಂಭವಿಸುತ್ತಿವೆ. ತಡೆಗೋಡೆ ನಿರ್ಮಿಸಲು ಜನಪ್ರತಿನಿಧಿಗಳು, ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಚಾಲಕ ಬಸವರಾಜ ಒತ್ತಾಯಿಸಿದರು.

Edited By : Nagaraj Tulugeri
Kshetra Samachara

Kshetra Samachara

07/01/2025 10:44 am

Cinque Terre

4.1 K

Cinque Terre

0

ಸಂಬಂಧಿತ ಸುದ್ದಿ