ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು : ಮಾರ್ಚ್‌ 1ರಿಂದ 8ರ ವರೆಗೆ 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ - ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಮಾರ್ಚ್‌ 1ರಿಂದ 8ರ ವರೆಗೆ 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ನಡೆಯಲಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ಈ ಕುರಿತು ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗೊಷ್ಠಿ ನಡೆಸಿದ ಮಾಹಿತಿ ನೀಡಿದ ಸಿಎಂ ಸಿದ್ದರಾಮಯ್ಯ,16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಮಾರ್ಚ್‌ 1ರಿಂದ 8ರ ವರೆಗೆ ನಡೆಯಲಿದೆ.

ಈ ವರ್ಷದ ಚಲನಚಿತ್ರೋತ್ಸವದ ಥೀಮ್‌ ʻಸರ್ವ ಜನಾಂಗದ ಶಾಂತಿಯ ತೋಟʼ ಆಯ್ಕೆ ಮಾಡಲಾಗಿದೆ. ಕಳೆದ ವರ್ಷ ʻಸಾಮಾಜಿಕ ನ್ಯಾಯʼ ಥೀಮ್‌ನಲ್ಲಿ ಚಲನಚಿತ್ರೋತ್ಸವ ಆಯೋಜಿಸಲಾಗಿತ್ತು ಎಂದರು.

2006ರಲ್ಲಿ ಆರಂಭವಾದ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಇದೀಗ 16ನೇ ಆವೃತ್ತಿಗೆ ಪ್ರವೇಶಿಸುತ್ತಿದೆ. ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಅಂತಾರಾಷ್ಟ್ರೀಯ ಮನ್ನಣೆ ಪಡೆದಿದ್ದು, ಬೆಂಗಳೂರು ಭಾರತೀಯ ಮತ್ತು ಅಂತಾರಾಷ್ಟ್ರೀಯ ಸಿನೆಮಾ ಸಂಸ್ಕೃತಿಯ ಮುಖ್ಯಕೇಂದ್ರವಾಗಿ ಬೆಳೆದಿದೆ.

ಚಲನಚಿತ್ರೋತ್ಸವದಲ್ಲಿ ಪ್ರತಿ ವರ್ಷ 60ಕ್ಕೂ ದೇಶಗಳಿಂದ ಬಂದ ಸುಮಾರು 200ಕ್ಕೂ ಅಧಿಕ ಚಲನಚಿತ್ರಗಳನ್ನು, 13 ಚಿತ್ರಮಂದಿರಗಳಲ್ಲಿ, ಸುಮಾರು 400 ಪ್ರದರ್ಶನಗಳನ್ನು ಆಯೋಜಿಸಲಾಗುತ್ತಿದೆ. ಪ್ರತಿ ಆವೃತ್ತಿಯಲ್ಲಿ ಸುಮಾರು ಒಂದು ಲಕ್ಷಕ್ಕೂ ಅಧಿಕ ಪ್ರತಿನಿಧಿಗಳು ಭಾಗವಹಿಸುತ್ತಿದ್ದಾರೆ ಎಂದು ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವದ ಬಗ್ಗೆ ಮಾಹಿತಿ ನೋಡಿದರು.

Edited By : Shivu K
PublicNext

PublicNext

07/01/2025 11:03 am

Cinque Terre

26.2 K

Cinque Terre

0

ಸಂಬಂಧಿತ ಸುದ್ದಿ