ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಶಾಸಕ ಪ್ರಸಾದ್ ಅಬ್ಬಯ್ಯಗೆ ಫೋನ್‌ನಲ್ಲಿ ಧಮಕಿ - ಆರೋಪಿ ಸುಧಾಕರ್ ಅರೆಸ್ಟ್

ಹುಬ್ಬಳ್ಳಿ: ಶಾಸಕ ಪ್ರಸಾದ ಅಬ್ಬಯ್ಯ ಅವರಿಗೆ ಫೋನ್‌ಗೆ ಕರೆ ಮಾಡಿದ ವ್ಯಕ್ತಿಯೊಬ್ಬ, ಶಾಸಕ ಹಾಗೂ ಅವರ ಅಂಗ ರಕ್ಷಕಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಧಮಕಿ ಹಾಕಿದ್ದರ ಕುರಿತು ಬೆಂಡಿಗೇರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಂಗ ರಕ್ಷಕ ಶ್ರೀಶೈಲ ಹಡಪದ ಕರ್ತವ್ಯದ ಮೇಲಿದ್ದರು. ಆಗ ಕರೆ ಮಾಡಿದ ಸುಧಾಕರ ಭವಾನಿಮಠ ಎಂಬಾತ ಶ್ರೀಶೈಲ ಹಾಗೂ ಶಾಸಕರಿಗೂ ಬೈದು, ಧಮಕಿ ಹಾಕಿ ಕರ್ತವ್ಯಕ್ಕೆ ಅಡ್ಡಿಪಡಿಸಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಬೆಂಡಿಗೇರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಸುಧಾಕರ ಭವಾನಿಮಠ ಅವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Edited By : Nagaraj Tulugeri
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

07/01/2025 12:45 pm

Cinque Terre

73.37 K

Cinque Terre

7

ಸಂಬಂಧಿತ ಸುದ್ದಿ