ಚ.ಕಿತ್ತೂರು: ಕಿತ್ತೂರು ಮತಕ್ಷೇತ್ರದ 35 ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಲ್ಲಿ ಗ್ರಾಮ ಪಂಚಾಯಿತಿಯಿಂದ ಕರ ವಸೂಲಿ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಸಾರ್ವಜನಿಕರು ಕರ ತುಂಬುವ ಮೂಲಕ ಗ್ರಾಮ ಪಂಚಾಯಿತಿಗಳಿಗೆ ಸಹಕಾರ ನೀಡಬೇಕು ಎಂದು ಶಾಸಕ ಬಾಬಾ ಸಾಹೇಬ ಪಾಟೀಲ್ ಹೇಳಿದರು.
ನೇಗಿನಾಳ ಗ್ರಾಮದಲ್ಲಿ ಇಂದು ಕರ ವಸೂಲಿ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಪ್ರತಿಯೊಂದು ಗ್ರಾಮಗಳಲ್ಲಿ ಕರದಾತರು ತಮ್ಮ ತೆರಿಗೆಯ ಪಾಲನ್ನು ನೀಡುವುದರಿಂದ ಗ್ರಾಮದ ಅಭಿವೃದ್ಧಿಗೆ ಸಹಾಯಕಾರಿಯಾಗುತ್ತದೆ ಮತ್ತು ಕರವಸೂಲಿ ಹೆಚ್ಚಿನ ಮಟ್ಟದಲ್ಲಿ ಪ್ರಗತಿ ಸಾಧಿಸಲು ಸಾಧ್ಯವಾಗುತ್ತದೆ ಎಂದರು. ಈ ನಿಟ್ಟಿನಲ್ಲಿ ಎಲ್ಲ ಗ್ರಾಮ ಪಂಚಾಯಿತಿಗಳ ಪಿಡಿಒಗಳು ಕಾರ್ಯದರ್ಶಿಗಳು ಕರವಸೂಲಿ ಸಿಬ್ಬಂದಿ ಈ ಮಾಸಾಚರಣೆಯಲ್ಲಿ ಪ್ರತಿದಿನ ಬೆಳಿಗ್ಗೆ ಮತ್ತು ಸಾಯಂಕಾಲ ಮನೆ ಮನೆಗೆ ತೆರಳಿ ಶೇಕಡಾ ನೂರರಷ್ಟು ಪ್ರಗತಿ ಸಾಧಿಸಲು ನಿರ್ದೇಶನ ನೀಡಲಾಗಿದೆ ಎಂದರು.
ನಂತರ ಚ.ಕಿತ್ತೂರು ಹಾಗೂ ಬೈಲಹೊಂಗಲ ತಾಲೂಕು ಪಂಚಾಯಿತಿ ಇಓ ಕಿರಣ್ ಘೋರ್ಪಡೆ ಮಾತನಾಡಿ, ಗ್ರಾಮ ಪಂಚಾಯತಿ. ಅಧಿಕಾರಿಗಳು, ಸಿಬ್ಬಂದಿ ನಿಮ್ಮ ಮನೆ ಬಾಗಿಲಿಗೆ ಬಂದು ಕರ ತುಂಬಿಸಿಕೊಳ್ಳುತ್ತಿದ್ದಾರೆ. ತೆರಿಗೆದಾರರು ತಮ್ಮ ಬಾಕಿ ಇರುವ ಕರವನ್ನು ತುಂಬುವ ಮೂಲಕ ಕರ ವಸೂಲಿ ಅಭಿಯಾನವನ್ನು ಯಶಸ್ವಿಯಾಗುವಂತೆ ಮಾಡಬೇಕು ಎಂದರು.
ಈ ಸಂದರ್ಭದಲ್ಲಿ ಪಿಡಿಓ ಬಸನಗೌಡ ಪಾಟೀಲ್ ಹಾಗೂ ಗ್ರಾಮ ಸದಸ್ಯರು, ಸಿಬ್ಬಂದಿ ಹಾಜರಿದ್ದರು.
Kshetra Samachara
07/01/2025 12:57 pm