ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ಫೊಕ್ಸೋ ಪ್ರಕರಣದ ಆರೋಪಿಗೆ ಜೈಲು ಶಿಕ್ಷೆ, ದಂಡ posted

ಮಂಗಳೂರು: ಬಾತ್‌ರೂಮ್‌ನಲ್ಲಿ ಸ್ನಾನ ಮಾಡುತ್ತಿದ್ದ ಬಾಲಕಿಯ ವೀಡಿಯೊ ಚಿತ್ರೀಕರಣ ಮಾಡಿದ ಆರೋಪಿಗೆ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (ಫೊಕ್ಸೋ) ಎಫ್‌ಟಿಎಸ್‌ಸಿ-1 ನ್ಯಾಯಾಲಯದ ನ್ಯಾಯಾಧೀಶ ವಿನಯ್ ದೇವರಾಜ್ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ.

ಶಿಕ್ಷೆಗೊಳಾದ ಆರೋಪಿಯನ್ನು ಗಗನ್ (24) ಎಂದು ಗುರುತಿಸಲಾಗಿದೆ

ಈತ 2024ರ ಮಾ.10ರಂದು ರಾತ್ರಿ ಬಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯ ಮನೆಯೊಂದರಲ್ಲಿ ಬಾಲಕಿ ಸ್ನಾನ ಮಾಡುತ್ತಿದ್ದ ವೇಳೆ ಮೊಬೈಲ್‌ನಲ್ಲಿ ಚಿತ್ರೀಕರಣ ಮಾಡಿದ್ದ. ಮೊಬೈಲ್ ಬೆಳಕು ಕಂಡು ಬಾಲಕಿ ಬೊಬ್ಬೆ ಹೊಡೆದಾಗ ಆಕೆಯ ತಾಯಿ ಓಡಿಬಂದಿದ್ದರು. ಈ - ವೇಳೆ ಆರೋಪಿ ಓಡಿ ತಪ್ಪಿಸಿಕೊಂಡಿದ್ದ. ಈ ಬಗ್ಗೆ ಬಜ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಎಸ್ ಐ ಗಳಾದ ಗುರಪ್ಪ ಕಾಂತಿ ಮತ್ತು ರೇವಣ್ಣ ಸಿದ್ದಪ್ಪ ಜಿ. ತನಿಖೆ ನಡೆಸಿದ್ದರು. ಎಸ್ ಐ ಸತೀಶ್ ಕೆ.ಎಸ್. ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.ಪ್ರಕರಣ ನಡೆದು 9 ತಿಂಗಳಲ್ಲೇ ನ್ಯಾಯಾಲಯ ಆರೋಪಿಗೆ ಶಿಕ್ಷೆ ವಿಧಿಸಿದೆ. ಭಾರತೀಯ ದಂಡ ಸಂಹಿತೆಯ ಕಲಂ 354 (ಸಿ) ಅಡಿಯಲ್ಲಿ ಆರೋಪಿಗೆ 1 ವರ್ಷ ಸಾದಾ ಸಜೆ, 20,000 ರೂ. ದಂಡ ವಿಧಿಸಲಾಗಿದೆ. ದಂಡ ಪಾವತಿಸಲು ತಪ್ಪಿದರೆ ಹೆಚ್ಚುವರಿ 3 ತಿಂಗಳ ಸಾದಾ ಶಿಕ್ಷೆ ಅನುಭವಿಸಲು ಸೂಚಿಸಿದೆ. ದಂಡದ ಮೊತ್ತದಲ್ಲಿ 10,000 ರೂ. ಅಲ್ಲದೆ ಪ್ರತ್ಯೇಕವಾಗಿ 1ಲಕ್ಷ ರೂ. ಗಳನ್ನು ನೊಂದ ಬಾಲಕಿಗೆ ಪರಿಹಾರವಾಗಿ ನೀಡುವಂತೆ ನ್ಯಾಯಾಧೀಶರು ಕಾನೂನು ಸೇವಾ ಪ್ರಾಧಿಕಾರಕ್ಕೆ ನಿರ್ದೇಶನ ನೀಡಿದ್ದಾರೆ.ಪ್ರಾಸಿಕ್ಯೂಷನ್ ಪರವಾಗಿ ವಿಶೇಷ ಸರಕಾರಿ ಅಭಿಯೋಜಕಿ ಸಹನಾದೇವಿ ಬೋಳೂರು ವಾದಿಸಿದ್ದರು.

Edited By : PublicNext Desk
Kshetra Samachara

Kshetra Samachara

07/01/2025 01:20 pm

Cinque Terre

1.19 K

Cinque Terre

0

ಸಂಬಂಧಿತ ಸುದ್ದಿ