ವಿಟ್ಲ: ರಿಕ್ಷಾವೊಂದು ಅತೀ ವೇಗ ಹಾಗೂ ಅಜಾಗರೂಕತೆಯಿಂದ ಚಲಾಯಿಸಿ ಕೊಂಡು ಬಂದು ದ್ವಿಚಕ್ರ ವಾಹನಕ್ಕೆ ಢಿಕ್ಕಿಯಾಗಿ ಚರಂಡಿ ಗಿಳಿದ ಘಟನೆ ಪುಣಚದಲ್ಲಿ ನಡೆದಿದೆ.
ರಿಕ್ಷಾ ಚಾಲಕ ದಾಮೋದರ್ ಸಣ್ಣಪುಟ್ಟ ಗಾಯಗೊಂಡಿದ್ದಾರೆ. ರಿಕ್ಷಾ ಹಾಗೂ ದ್ವಿಚಕ್ರ ವಾಹನ ಜಖಂಗೊಂಡಿದೆ. ಪಾನಮತ್ತರಾಗಿ ರಿಕ್ಷಾ ಚಲಾಯಿಸಿದ್ದೇ ಘಟನೆಗೆ ಕಾರಣ ಎನ್ನಲಾಗಿದೆ. ವಿಟ್ಲ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ.
Kshetra Samachara
07/01/2025 01:24 pm