ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ಅಶುದ್ಧ ನೀರು ಪೂರೈಕೆ - ಜನವರಿ 17ರಂದು ಮುಖ್ಯಮಂತ್ರಿಗೆ ಸತ್ಯಶೋಧನಾ ವರದಿ ಹಸ್ತಾಂತರ

ಮಂಗಳೂರು: ಮಹಾನಗರ ಪಾಲಿಕೆ ವ್ಯಾಪ್ತಿಯ 50%ರಷ್ಟು ಪ್ರದೇಶಗಳಿಗೆ ಶುದ್ಧೀಕರಿಸದ ನೀರು ಪೂರೈಕೆ ಮಾಡುತ್ತಿರುವ ವಿಚಾರವನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಈ ಕುರಿತು ತನಿಖೆ ನಡೆಸಲು ಕಾರ್ಪೊರೇಟರ್‌ಗಳು ಮತ್ತು ತಜ್ಞರನ್ನೊಳಗೊಂಡ ಸತ್ಯಶೋಧನಾ ಸಮಿತಿ ರಚಿಸಿ ಅದರ ವರದಿಯನ್ನು ರಾಜ್ಯ ಸರ್ಕಾರಕ್ಕೆ ನೀಡಲಾಗುವುದು ಎಂದು ವಿಧಾನ ಪರಿಷತ್‌ ಸದಸ್ಯ ಐವನ್ ಡಿಸೋಜ ತಿಳಿಸಿದ್ದಾರೆ.

ಪಾಲಿಕೆಯ ವಿಪಕ್ಷ ಸದಸ್ಯರ ಜತೆ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕಲುಷಿತವಾಗಿರುವ 13 ನದಿಗಳ ಪೈಕಿ ನೇತ್ರಾವತಿಯೂ ಸೇರಿರುವ ವೈಜ್ಞಾನಿಕ ವರದಿ ಬಹಿರಂಗವಾದ ಬಳಿಕವೂ ಸಂಸ್ಕರಿಸದ ಮಲೀನ ನೀರನ್ನೇ ಜನರಿಗೆ ನೀಡುತ್ತಿರುವುದು ಆತಂಕದ ವಿಚಾರ. ಜನವರಿ 17ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಿಲ್ಲೆಗೆ ಭೇಟಿ ನೀಡುವ ಮೊದಲು ಈ ಕುರಿತು ಸತ್ಯಶೋಧನಾ ವರದಿ ಸಿದ್ಧಪಡಿಸಿ ಸಿಎಂ ಅವರಿಗೆ ಹಸ್ತಾಂತರಿಸಲಾಗುವುದು ಎಂದು ಹೇಳಿದರು.

ಶುದ್ಧೀಕರಿಸದ ನೀರಿನಿಂದ ಜನರಿಗೆ ಏನಾದರೂ ಸಮಸ್ಯೆಯಾದರೆ ಅದಕ್ಕೆ ಮಹಾನಗರ ಪಾಲಿಕೆಯ ಆಡಳಿತವೇ ನೇರ ಹೊಣೆಯಾಗಲಿದೆ. ಈ ವಿಚಾರವನ್ನು ಇದುವರೆಗೂ ಸರ್ಕಾರದ ಗಮನಕ್ಕೆ ಏಕೆ ತರಲಿಲ್ಲ? ಜನರ ಆರೋಗ್ಯದ ಮೇಲೆ ಪರಿಣಾಮ ಬೀರುವ ಕುರಿತು ನಗರಾಭಿವೃದ್ಧಿ ಸಚಿವರ ಗಮನಕ್ಕೂ ತರಲಾಗಿದೆ. ಈ ಕುರಿತು ಸರ್ಕಾರ ಮಧ್ಯ ಪ್ರವೇಶಿಸಬೇಕು ಎನ್ನುವ ಮನವಿ ಮಾಡಲಾಗಿದೆ ಎಂದು ಐವನ್ ಡಿಸೋಜ ತಿಳಿಸಿದರು.

Edited By : Suman K
Kshetra Samachara

Kshetra Samachara

07/01/2025 01:55 pm

Cinque Terre

2.35 K

Cinque Terre

1

ಸಂಬಂಧಿತ ಸುದ್ದಿ