ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸ್ಮಾರ್ಟ್ ಸಿಟಿ ಅವ್ಯವಹಾರದ ತನಿಖೆಗೆ ಆದೇಶ: ಲೂಟಿ ಹೊಡೆದವರಿಗೆ ಹುಟ್ಟಿದೆ ನಡುಕ..!

ಹುಬ್ಬಳ್ಳಿ: ದೇಶದ ಪ್ರಧಾನಿ ನರೇಂದ್ರ ಮೋದಿಯವರ ಕನಸಿನ ಯೋಜನೆ ಸ್ಮಾರ್ಟ್ ಸಿಟಿ. ಇದೇ ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ಅಧಿಕಾರಿಗಳು ಸ್ಮಾರ್ಟ್ ಆಗಿ ಲೂಟಿ ಮಾಡಿದ್ದಾರೆ. ಇದನ್ನರಿತ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಎಲ್ಲಾ ಯೋಜನೆಗಳನ್ನ ತನಿಖೆ ಮಾಡಬೇಕೆಂದು ಆದೇಶ ಮಾಡಿದ್ದಾರೆ. ಹೀಗಾಗಿ ಕೊಳ್ಳೆ ಹೊಡೆದ ಅಧಿಕಾರಿಗಳ ಎದೆಯಲ್ಲಿ ಢವಡವ ಆರಂಭವಾಗಿ ನಡುಕ ಹುಟ್ಟಿದೆ.

ಸ್ಮಾರ್ಟ್ ಸಿಟಿಯ ಬಣ್ಣ ಬಯಲಾಗಲಿದೆ. ಸ್ಮಾರ್ಟ್‌ ಸಿಟಿ ಅಭಿಯಾನದ ಅಡಿ ರಾಜ್ಯದ 6 ಸ್ಮಾರ್ಟ್‌ ಸಿಟಿ (ಬೆಂಗಳೂರು ಹೊರತುಪಡಿಸಿ) ಯೋಜನೆಗಳಲ್ಲಿ ನಡೆದಿರುವ ಕಾಮಗಾರಿಗಳನ್ನು ಸಂಪೂರ್ಣ ತನಿಖೆಗೆ ನಡೆಸಿ, ವರದಿ ನೀಡುವಂತೆ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್ ಸೂಚಿಸಿದ್ದಾರೆ. ಹೌದು.. ಸ್ಮಾರ್ಟ್‌ ಸಿಟಿ ಅಭಿಯಾನದಡಿ ರಾಜ್ಯ ಬೆಳಗಾವಿ, ದಾವಣಗೆರೆ, ಹುಬ್ಬಳ್ಳಿ - ಧಾರವಾಡ, ಮಂಗಳೂರು, ಶಿವಮೊಗ್ಗ ಹಾಗೂ ತುಮಕೂರು ನಗರಗಳಲ್ಲಿ ನಡೆದಿರುವ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯನ್ನು ನಡೆಸಿ ಸೂಚನೆ ನೀಡಿದ್ದು, ಹುಬ್ಬಳ್ಳಿ ಧಾರವಾಡ ಅವಳಿನಗರದ 990 ಕೋಟಿ ಸ್ಮಾರ್ಟ್ ಸಿಟಿ ಯೋಜನೆ ಅವ್ಯವಹಾರ ಬಯಲಿಗೆ ಬರಲಿದೆ ಎಂಬುವುದು ಸಾರ್ವಜನಿಕರ ಆಶಾಭಾವ ಇಮ್ಮಡಿಗೊಳಿಸಿದ್ದು, ನ್ಯಾಯಾಧೀಶರ ನೇತೃತ್ವದಲ್ಲಿಯೇ ತನಿಖೆ ನಡೆಸುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.

ಸ್ಮಾರ್ಟ್‌ ಸಿಟಿ ಅಭಿಯಾನ ಶುರುವಾದಾಗಿನಿಂದ ಇಲ್ಲಿಯವರೆಗೂ ರಾಜ್ಯದ 7 ಸ್ಮಾರ್ಟ್‌ ಸಿಟಿಗಳಲ್ಲಿ 6,415.51 ಕೋಟಿ ರೂ. ವೆಚ್ಚದ ಕಾಮಗಾರಿಗಳು ನಡೆದಿದ್ದು, ಪೂರ್ಣಗೊಂಡಿರುವ ಹಲವು ಕಾಮಗಾರಿಗಳು ಅಷ್ಟೊಂದು ತೃಪ್ತಿದಾಯಕವಾಗಿಲ್ಲವೆಂದು ತಿಳಿದು ಬಂದಿದೆ. ಆದ ಕಾರಣ ಬೆಂಗಳೂರು ಹೊರತುಪಡಿಸಿ (877.82 ಕೋಟಿ ರೂ. ಕಾಮಗಾರಿ ಬೆಂಗಳೂರು ಸ್ಮಾರ್ಟ್‌ ಸಿಟಿಯಲ್ಲಿ ಪೂರ್ಣ) ಇತರ 6 ಸ್ಮಾರ್ಟ್‌ ಸಿಟಿಗಳ ಯೋಜನೆಗಳ ಬಗ್ಗೆ ಸ್ವತಂತ್ರ ಸಂಸ್ಥೆ ಒಳಗೊಂಡಂತೆ ಸಮಿತಿ ರಚಿಸಿ ತನಿಖೆ ನಡೆಸಿ 3 ತಿಂಗಳ ಕಾಲಮಿತಿಯೊಳಗೆ ವರದಿ ಸಲ್ಲಿಸುವಂತೆ ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿಯವರಿಗೆ ಸಚಿವ ಬೈರತಿ ಸುರೇಶ್ ಸೂಚಿಸಿದ್ದಾರೆ. ಹುಬ್ಬಳ್ಳಿ ಧಾರವಾಡ ಅವಳಿನಗರದಲ್ಲಿ 990 ಕೋಟಿ ವೆಚ್ಚದಲ್ಲಿ 50ಕ್ಕೂ ಹೆಚ್ಚು ಕಾಮಗಾರಿ ನಡೆಸಲಾಗಿದ್ದು, ಯಾವುದೇ ಕಾಮಗಾರಿ ಮಾತ್ರ ಸಾರ್ವಜನಿಕರಿಗೆ ತೃಪ್ತಿ ತಂದಿಲ್ಲ. ಈ ನಿಟ್ಟಿನಲ್ಲಿ ಸರ್ಕಾರದ ತನಿಖೆಯ ಆದೇಶವನ್ನು ಹುಬ್ಬಳ್ಳಿ ಜನರು ಸ್ವಾಗತಿಸಿದ್ದಾರೆ.

ಮಲ್ಲೇಶ್ ಸೂರಣಗಿ ಪಬ್ಲಿಕ್ ನೆಕ್ಸ್ಟ್ ಹುಬ್ಬಳ್ಳಿ

Edited By : Suman K
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

07/01/2025 02:25 pm

Cinque Terre

41.08 K

Cinque Terre

3

ಸಂಬಂಧಿತ ಸುದ್ದಿ