ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ ಪ್ರತ್ಯೇಕ ಪಾಲಿಕೆ ನಿರ್ಧಾರಕ್ಕೆ ಅಭಿನಂದನೆ : ಸಾಮಾನ್ಯ ಸಭೆಯಲ್ಲಿ ಸ್ವಾಗತ

ಹುಬ್ಬಳ್ಳಿ : ಧಾರವಾಡಕ್ಕೆ ಪ್ರತ್ಯೇಕ ಪಾಲಿಕೆಯ ಸರ್ಕಾರದ ಆದೇಶವನ್ನು ಪಾಲಿಕೆಯ ಸಾಮಾನ್ಯ ಸಭೆಯಲ್ಲಿ ಸ್ವಾಗತಿಸುವ ಮೂಲಕ ಸರ್ಕಾರಕ್ಕೆ ಪಾಲಿಕೆ ಸದಸ್ಯರು ಅಭಿನಂದನೆ ಸಲ್ಲಿಸಿದರು.

ಹುಬ್ಬಳ್ಳಿಯಲ್ಲಿ ನಡೆದ ಸಭೆಯಲ್ಲಿ ಪಾಲಿಕೆಯ ಕಾಂಗ್ರೆಸ್ ಸದಸ್ಯರು, ನಮ್ಮ ಸರ್ಕಾರ ನುಡಿದಂತೆ ನಡೆದಿದ್ದು, ಆಡಳಿತಾತ್ಮಕ ದೃಷ್ಟಿಯಿಂದ ಹುಬ್ಬಳ್ಳಿ ಧಾರವಾಡ ಪ್ರತ್ಯೇಕ ಪಾಲಿಕೆಯ ಆದೇಶವನ್ನು ಘೋಷಣೆ ಮಾಡಿದ್ದು, ನಿಜಕ್ಕೂ ಸ್ವಾಗತಾರ್ಹವಾಗಿದೆ ಎಂದು ಪಾಲಿಕೆ ಕಾಂಗ್ರೆಸ್ ಸದಸ್ಯರು ಅಭಿನಂದನೆ ಸಲ್ಲಿಸಿದರು.

ಇನ್ನೂ ಪಾಲಿಕೆಯ ಬಗ್ಗೆ ಸಾರ್ವಜನಿಕ ಗೊಂದಲವನ್ನು ನಿವಾರಣೆ ಮಾಡುವಂತೆ ಆಯಕ್ತರಿಗೆ ಪಾಲಿಕೆ ಸದಸ್ಯ ರಾಜಣ್ಣ ಕೊರವಿ ಸೂಚನೆ ನೀಡಿದ್ದು, ಆಯುಕ್ತರು 30 ದಿನಗಳಲ್ಲಿ ಈ ಗೊಂದಲಕ್ಕೆ ತೆರೆ ಬೀಳಲಿದ್ದು, ಸರ್ಕಾರದ ಮತ್ತೊಂದು ಆದೇಶದ ಬಳಿಕ ಎಲ್ಲವನ್ನೂ ಕಾರ್ಯರೂಪಕ್ಕೆ ತರಲಾಗುತ್ತದೆ ಎಂದು ಮಾಹಿತಿ ನೀಡಿದರು.

Edited By : Somashekar
Kshetra Samachara

Kshetra Samachara

07/01/2025 02:25 pm

Cinque Terre

13.07 K

Cinque Terre

0

ಸಂಬಂಧಿತ ಸುದ್ದಿ