ಕೋಲಾರ - ಕೋಲಾರ ನಗರದ ಡಿಡಿಪಿಐ ಕಚೇರಿಯಲ್ಲಿ ಸಂವಿಧಾನ ಪೀಠಿಕೆ ಅಳವಡಿಸದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಪ್ರತಿಭಟನಕಾರರು ‘ಗೀತಾ ಸಾರ’ವನ್ನು ಕಿತ್ತೊಗೆದು ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆದಿದೆ. ಕೋಲಾರ ನಗರದ ಬಂದ್‌ಗೆ (ಜ.3) ಕರೆ ನೀಡಿದ್ದ ದಿನ ಈ ಘಟನೆ ನಡೆದಿದ್ದು, ಈಗ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವಹೇಳನ ಮಾಡಿದ್ದಾರೆ ಎಂದು ಆರೋಪಿಸಿ ದಲಿತ ಹಾಗೂ ಪ್ರಗತಿಪರ ಸಂಘಟನೆಗಳು ಬಂದ್‌ಗೆ ಕರೆ ನೀಡಿದ್ದವು.ಈ ಸಂದರ್ಭದಲ್ಲಿ ಡಿಡಿಪಿಐ ಕಚೇರಿಗೆ ಕೆಲ ಮುಖಂಡರು ಹೋಗಿದ್ದಾರೆ. ಶ್ರೀಕೃಷ್ಣನ ಗೀತಾ ಸಾರ ಹರಿದು ಹಾಕಿ ಡಿಡಿಪಿಐ ಹಾಗೂ ಸಿಬ್ಬಂದಿಗೆ ತರಾಟೆ ತೆಗೆದುಕೊಂಡಿದ್ದಾರೆ. ‘ಏಕೆ ಸಂವಿಧಾನ ಪೀಠಿಕೆ ಅಳವಡಿಸಿಲ್ಲ. ಅದರ ಜಾಗದಲ್ಲಿ ಏಕೆ ಗೀತಾ ಸಾರ ಅಳವಡಿಸಿದ್ದೀರಿ’ ಎಂದು ಪ್ರಶ್ನಿಸಿದ್ದಾರೆ.
Kshetra Samachara
07/01/2025 02:39 pm