ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರಿಗೆ ಆಗಮಿಸಿದ ಉಪರಾಷ್ಟ್ರಪತಿ ಜಗದೀಶ್ ಧನ್‌ಕರ್

ಮಂಗಳೂರು: ದ.ಕ.ಜಿಲ್ಲಾ ಪ್ರವಾಸದಲ್ಲಿರುವ ಉಪರಾಷ್ಟ್ರಪತಿ ಜಗದೀಶ್ ಧನ್‌ಕರ್ ಅವರು ಮಂಗಳವಾರ ಮಧ್ಯಾಹ್ನದ 1ಗಂಟೆ ಸುಮಾರಿಗೆ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು.

ಮಂಗಳವಾರ ಬೆಳಗ್ಗೆ ದೆಹಲಿಯಿಂದ ಪತ್ನಿ‌ ಸಹಿತರಾಗಿ ಹೊರಟ ಅವರು ಮಧ್ಯಾಹ್ನ 1.05ಕ್ಕೆ ಮಂಗಳೂರು ವಿಮಾನ ನಿಲ್ದಾಣ ತಲುಪಿದ್ದಾರೆ. ರಾಜ್ಯ ಸರಕಾರದ ಪರವಾಗಿ ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್ ಉಪರಾಷ್ಟ್ರಪತಿಯವರನ್ನು ಸ್ವಾಗತಿಸಿದರು. ಈ ವೇಳೆ ದ.ಕ.ಜಿಲ್ಲಾ ಸಂಸದ ಕ್ಯಾ.ಬ್ರಿಜೇಶ್ ಚೌಟ, ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್, ಪೊಲೀಸ್ ಕಮಿಷನರ್ ಅನುಪಮ್ ಅಗ್ರವಾಲ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಮಂಗಳೂರು ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್‌ನಲ್ಲಿ ಅವರು ಧರ್ಮಸ್ಥಳಕ್ಕೆ ತೆರಳಿದರು‌. ಮಧ್ಯಾಹ್ನ 1.45ಕ್ಕೆ ಧರ್ಮಸ್ಥಳ ಹೆಲಿಪ್ಯಾಡ್‍ಗೆ ಆಗಮಿಸುವ ಅವರು, ಧರ್ಮಸ್ಥಳದಲ್ಲಿ ಮೆಗಾ ಕ್ಯೂ ಕಾಂಪ್ಲೆಕ್ಸ್ ಉದ್ಘಾಟನೆ ಮತ್ತು 2024-25 ಜ್ಞಾನದೀಪ ಕಾರ್ಯಕ್ರಮಕ್ಕೆ ಚಾಲನೆ ನೀಡುವರು.

Edited By : Suman K
PublicNext

PublicNext

07/01/2025 03:44 pm

Cinque Terre

20.48 K

Cinque Terre

1

ಸಂಬಂಧಿತ ಸುದ್ದಿ