ಹುಬ್ಬಳ್ಳಿ: ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ನಡುವೆ ಒಳ ಜಗಳ ಆರಂಭಗೊಂಡಿದೆ. ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗಬೇಕೆಂದು ಕನಸು ಕಾಣುತ್ತಿದ್ದಾರೆ. ಅದು ಕನಸಾಗಿಯೇ ಉಳಿದು ಹೋಗಲಿದೆ ಎಂದು ಹುಬ್ಬಳ್ಳಿಯಲ್ಲಿ ವಿರೋಧ ಪಕ್ಷದ ಉಪನಾಯಕ ಅರವಿಂದ ಬೆಲ್ಲದ್ ಭವಿಷ್ಯ ನುಡಿದ್ದಾರೆ.
ಮಾಧ್ಯಮವರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರ ಅಧಿಕಾರದ ಅವಧಿ ಮುಗಿಯುವ ಹಂತಕ್ಕೆ ಬಂದಿದೆ. ಹೀಗಾಗಿ ಕಾಂಗ್ರೆಸ್‌ನ ಒಬ್ಬೊಬ್ಬ ನಾಯಕರು ಔತಣ ಕೂಟವನ್ನ ಏರ್ಪಡಿಸುತ್ತಿದ್ದಾರೆ. ಎಸ್.ಎಂ.ಕೃಷ್ಣ ಅವರ ಮನೆ ಬಾಗಿಲು ಒದ್ದು ಅಧಿಕಾರ ಪಡೆದುಕೊಂಡಿದ್ದೆ ಎಂದು ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಅದರಂತೆ ಡಿ.ಕೆ.ಶಿವಕುಮಾರ್ ಅವರು ಸಿದ್ದರಾಮಯ್ಯ ಅವರ ಮನೆ ಬಾಗಿಲು ಒದ್ದು ಮುಖ್ಯಮಂತ್ರಿ ಆಗಲು ಹೊರಟಿದ್ದಾರೆ ಎಂದರು.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
07/01/2025 03:52 pm