ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನೊಂದಿಗೆ ಓಡಿಹೋದ ಮಹಿಳೆ.!

ಲಕ್ನೋ: 36 ವರ್ಷದ ಮಹಿಳೆಯೊಬ್ಬಳು ತನ್ನ ಪತಿ ಮತ್ತು ಆರು ಮಕ್ಕಳನ್ನು ತೊರೆದು ಭಿಕ್ಷುಕನ ಜೊತೆ ಓಡಿಹೋದ ವಿಚಿತ್ರ ಘಟನೆ ಉತ್ತರ ಪ್ರದೇಶದ ಹರ್ದೋಯ್ ಜಿಲ್ಲೆಯಲ್ಲಿ ನಡೆದಿದೆ.

45 ವರ್ಷದ ರಾಜು ಅವರು ತಮ್ಮ ಪತ್ನಿ ರಾಜೇಶ್ವರಿ ಮತ್ತು ಅವರ ಆರು ಮಕ್ಕಳೊಂದಿಗೆ ಹರ್ದೋಯ್‌ನ ಹರ್ಪಾಲ್‌ಪುರ ಪ್ರದೇಶದಲ್ಲಿ ವಾಸವಾಗಿದ್ದಾರೆ. 45 ವರ್ಷದ ನನ್ಹೆ ಪಂಡಿತ್ ಎಂಬಾತ ಕೆಲವೊಮ್ಮೆ ಭಿಕ್ಷೆ ಬೇಡಲು ನೆರೆಹೊರೆಗೆ ಬರುತ್ತಿದ್ದ. ನನ್ಹೆ ಪಂಡಿತ್ ಆಗಾಗ್ಗೆ ರಾಜೇಶ್ವರಿ ಅವರೊಂದಿಗೆ ಹರಟೆ ಹೊಡೆಯುತ್ತಿದ್ದ. ಅಷ್ಟೇ ಅಲ್ಲದೆ ಅವರಿಬ್ಬರೂ ಫೋನ್‌ನಲ್ಲೂ ಮಾತನಾಡುತ್ತಿದ್ದರು.

ಜನವರಿ 3ರಂದು ಮಧ್ಯಾಹ್ನ 2 ಗಂಟೆ ಸುಮಾರಿಗೆ ನನ್ನ ಪತ್ನಿ ರಾಜೇಶ್ವರಿ, ನಮ್ಮ ಮಗಳು ಖುಷ್ಬೂಗೆ ಬಟ್ಟೆ, ತರಕಾರಿ ಖರೀದಿಸಲು ಮಾರುಕಟ್ಟೆಗೆ ಹೋಗುವುದಾಗಿ ಹೇಳಿದ್ದಳು. ಆಕೆ ವಾಪಸ್ ಬಾರದೆ ಇದ್ದಾಗ ಎಲ್ಲ ಕಡೆ ಹುಡುಕಾಡಿದರೂ ಪತ್ತೆಯಾಗದೇ ಪತ್ನಿ ಮನೆ ಬಿಟ್ಟು ಹೋಗಿದ್ದು ತಿಳಿದು ಬಂದಿದೆ. ನಾನು ಎಮ್ಮೆಯನ್ನು ಮಾರಿ ಸಂಪಾದಿಸಿದ ಹಣದಲ್ಲಿ ನನ್ಹೆ ಪಂಡಿತ್ ಆಕೆಯನ್ನು ತನ್ನೊಂದಿಗೆ ಕರೆದೊಯ್ದಿರುವ ಶಂಕೆ ಇದೆ ಎಂದು ರಾಜು ದೂರಿನಲ್ಲಿ ತಿಳಿಸಿದ್ದಾರೆ.

ನಾನ್ಹೆ ಪಂಡಿತ್‌ಗಾಗಿ ಹುಡುಕಾಟ ನಡೆಸುತ್ತಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ. ಮಹಿಳೆಯನ್ನು ವಶಪಡಿಸಿಕೊಳ್ಳಲಾಗಿದ್ದು, ಆಕೆಯ ಹೇಳಿಕೆಯನ್ನು ದಾಖಲಿಸಿಕೊಳ್ಳಲಾಗುತ್ತಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಶಿಲ್ಪಾ ಕುಮಾರಿ ತಿಳಿಸಿದ್ದಾರೆ.

ಮಹಿಳೆಯ ಅಪಹರಣಕ್ಕೆ ಸಂಬಂಧಿಸಿದ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 87 ರ ಅಡಿಯಲ್ಲಿ ಪತಿ ಪೊಲೀಸ್ ಠಾಣೆಗೆ ದೂರು ದಾಖಲಿಸಿದ್ದಾರೆ. 'ಎಮ್ಮೆ ಮಾರಿ ಬಂದ ಹಣದಲ್ಲಿ ನನ್ನ ಪತ್ನಿ ಮನೆ ಬಿಟ್ಟು ಹೋಗಿದ್ದಾಳೆ’ ಎಂದು ಸಂತ್ರಸ್ತ ರಾಜು ಹೇಳಿದ್ದಾರೆ.

Edited By : Vijay Kumar
PublicNext

PublicNext

07/01/2025 04:23 pm

Cinque Terre

14.67 K

Cinque Terre

1

ಸಂಬಂಧಿತ ಸುದ್ದಿ