ಪಾಟ್ನಾ: ಉಪವಾಸ ಸತ್ಯಾಗ್ರಹದ ನಡುವೆ ಆರೋಗ್ಯ ಹದಗೆಟ್ಟ ಹಿನ್ನೆಲೆಯಲ್ಲಿ ಜನ್ ಸೂರಾಜ್ ಪಕ್ಷದ ಮುಖ್ಯಸ್ಥ ಪ್ರಶಾಂತ್ ಕಿಶೋರ್ ಅವರನ್ನು ಐಸಿಯುಗೆ ದಾಖಲಿಸಲಾಗಿದೆ.
ಬಿಹಾರ ಲೋಕಸೇವಾ ಆಯೋಗ (ಬಿಪಿಎಸ್‌ಸಿ) ಡಿಸೆಂಬರ್ 13ರಂದು ನಡೆಸಿದ್ದ ಪರೀಕ್ಷೆಯನ್ನು ರದ್ದುಪಡಿಸಲು ಒತ್ತಾಯಿಸಿ ಆಮರಣ ನಿರಶನ ನಡೆಸುತ್ತಿದ್ದ ‘ಜನ ಸೂರಜ್’ ಪಕ್ಷದ ಸ್ಥಾಪಕ ಪ್ರಶಾಂತ್ ಕಿಶೋರ್ ಅವರನ್ನು ಸೋಮವಾರ ಮುಂಜಾನೆ ಪೊಲೀಸರು ಬಂಧಿಸಿದ್ದರು. ಅದಾದ ಕೆಲ ಗಂಟೆಗಳ ಬೆನ್ನಲ್ಲೇ ಬಿಡುಗಡೆಗೊಳಿಸಿದರು. ಇಂದು ಅವರ ಆರೋಗ್ಯದಲ್ಲಿ ಏರುಪೇರು ಕಂಡುಬಂದಿದೆ.
ಸೋಂಕು ಮತ್ತು ನಿರ್ಜಲೀಕರಣದ ರೋಗನಿರ್ಣಯದ ನಂತರ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಪ್ರಶಾಂತ್ ಅವರನ್ನು ಬಿಹಾರದ ಪಾಟ್ನಾದ ಮೇದಾಂತ ಆಸ್ಪತ್ರೆಯ ಐಸಿಯುಗೆ ಸ್ಥಳಾಂತರಿಸಲಾಗಿದೆ.
PublicNext
07/01/2025 04:58 pm