ನವಲಗುಂದ: ತಾಲೂಕಾ ಆಡಳಿತದ ವತಿಯಿಂದ ಪಟ್ಟಣದ ಮಿನಿ ವಿಧಾನಸೌಧದ ಸಭಾಂಗಣದಲ್ಲಿ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆಯನ್ನು ಆಚರಿಸಲಾಯಿತು.
ಶಾಸಕ ಎನ್.ಎಚ್.ಕೋನರೆಡ್ಡಿ ದೀಪ ಬೆಳಗಿಸುವುದರ ಮೂಲಕ ಉದ್ಘಾಟನೆಯನ್ನು ಮಾಡಿ ಜಕಣಾಚಾರಿ ಅವರ ಕುರಿತು ಮಾತನಾಡಿದರು.
ಈ ಸಂದರ್ಭದಲ್ಲಿ ತಹಶೀಲ್ದಾರ ಸುದೀರ ಸಾಹುಕಾರ, ನವಲಗುಂದ ಪುರಸಭೆ ಅಧ್ಯಕ್ಷ ಶಿವಾನಂದ ತಡಸಿ, ನವಲಗುಂದ ಪುರಸಭೆ ಮುಖ್ಯಾಧಿಕಾರಿ ಎಸ್.ಪಿ.ಪೂಜಾರ ಹಾಗೂ ತಾಲೂಕ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
Kshetra Samachara
07/01/2025 05:25 pm