ನಾಪೋಕ್ಲು : ನಾಪೋಕ್ಲು ಸಮೀಪದ ಕುಂಜಿಲ ಗ್ರಾಮದಲ್ಲಿರುವ ಕೆ.ಪಿ.ಬಾಣೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಸಂತೆ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು.
ಶಾಲೆಯ ಆವರಣದಲ್ಲಿ ಆಯೋಜಿಸಲಾದ ಕಾರ್ಯಕ್ರಮವನ್ನು ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷೆ ಸಫಿಯಾ ಅವರು ಉದ್ಘಾಟಿಸಿ ಮಾತನಾಡಿ ಮಕ್ಕಳ ಸಂತೆ ಕಾರ್ಯಕ್ರಮ ಆಯೋಜಿಸುವುದರಿಂದ ಮಕ್ಕಳಲ್ಲಿ ವ್ಯವಹಾರ ಜ್ಞಾನ ಬೆಳೆಸಲು ಸಹಕಾರಿಯಾಗಲಿದೆ. ಅದರಂತೆ ಮುಂದೆ ತಮ್ಮ ಜೀವನ ರೂಪಿಸಿಕೊಳ್ಳಲು ಮುನ್ನುಡಿಯಾಗಲಿದ್ದು ಇಂತಹ ಕಾರ್ಯಕ್ರಮವನ್ನು ಮಕ್ಕಳು ಸದುಪಯೋಗಪಡಿಸಿಕೊಳ್ಳಬೇಕು ಎಂದರು.
ಕಾರ್ಯಕ್ರಮದಲ್ಲಿ ಮಕ್ಕಳು ಸ್ಥಳೀಯವಾಗಿ ಬೆಳೆದ ಪೌಷ್ಟಿಕಾಂಶ ಯುಕ್ತ ತರಕಾರಿ, ಹಣ್ಣು, ಸೊಪ್ಪು, ವಿವಿಧಬಗೆಯ ತಿಂಡಿ ತಿನಿಸು, ತಂಪು ಪಾನೀಯಗಳನ್ನು ಮಾರುವ ಮೂಲಕ ಗಮನ ಸೆಳೆದರು. ಮಕ್ಕಳ ಸಂತೆ ಕಾರ್ಯಕ್ರಮದಲ್ಲಿ ಸ್ಥಳೀಯರು ವಸ್ತುಗಳನ್ನು ಖರೀದಿಸಿ ಮಕ್ಕಳ ವ್ಯವಹಾರ ಜ್ಞಾನಕ್ಕೆ ಪ್ರೋತ್ಸಾಹಿಸಿದರು.
Kshetra Samachara
07/01/2025 05:30 pm