ಮಣಿಪಾಲ: ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ICMR), ಭಾರತ ಸರ್ಕಾರದ ಅನುದಾನಿತ ಯಂಗ್ ಡಯಾಬಿಟಿಸ್ ರಿಜಿಸ್ಟ್ರಿ (YDR) ಹಂತ III ಮತ್ತು ವೈದ್ಯಕೀಯ ವಿಭಾಗ, ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಮಕ್ಕಳ ವಿಭಾಗ ಮತ್ತು ಮಕ್ಕಳ ಎಂಡೋಕ್ರೈನಾಲಜಿ ಕ್ಲಿನಿಕ್ ಇದರ ಸಹಯೋಗದಲ್ಲಿ ಮಧುಮೇಹಿ ಮಕ್ಕಳ ಕುರಿತಾಗಿ ಒಂದು ದಿನದ ಶೈಕ್ಷಣಿಕ ಕಾರ್ಯಕ್ರಮವನ್ನು ಆಯೋಜಿಸಲಾಯಿತು.
ಅನೇಕ ಮಧುಮೇಹಿ ಮಕ್ಕಳು (2-25 ವರ್ಷ) ತಮ್ಮ ಪೋಷಕರೊಂದಿಗೆ ಭಾಗವಹಿಸಿದ್ದರು. ಖಾಲಿ ಹೊಟ್ಟೆಯ ರಕ್ತದ ಸಕ್ಕರೆ (FBS) ಮತ್ತು ಗ್ಲೈಕೇಟೆಡ್ ಹಿಮೋಗ್ಲೋಬಿನ್ (HbA1c), ಆಂಥ್ರೊಪೊಮೆಟ್ರಿಕ್ ಮತ್ತು ಪ್ರಮುಖ ನಿಯತಾಂಕಗಳ ಪರೀಕ್ಷೆಗಳನ್ನು ಉಚಿತವಾಗಿ ಮಾಡಲಾಯಿತು.
ಮಣಿಪಾಲದ ಕೆಎಂಸಿಯ ವೈದ್ಯಕೀಯ ವಿಭಾಗದ ಪ್ರಾಧ್ಯಾಪಕ ಮತ್ತು ವೈಡಿಆರ್ III ರ ಪ್ರಭಾರಿ ಡಾ.ಶಿವಶಂಕರ ಕೆ.ಎನ್ ಮತ್ತು ಮಕ್ಕಳ ವಿಭಾಗದ ಮುಖ್ಯಸ್ಥ ಡಾ. ಲೆಸ್ಲಿ ಎಡ್ವರ್ಡ್ ಲೂಯಿಸ್ ಅವರ ಮಾತುಗಳೊಂದಿಗೆ ಕಾರ್ಯಕ್ರಮವನ್ನು ಆರಂಭಿಸಲಾಯಿತು.
ಕೆಎಂಸಿ, ಮಣಿಪಾಲ ಸಹ ಪ್ರಾಧ್ಯಾಪಕರು ಮತ್ತು ಮಕ್ಕಳ ಹಾರ್ಮೋನ್ ತಜ್ಞ ಡಾ. ಕೌಶಿಕ್ ಉರಾಳ ಹೆಚ್ ಅವರು ಕಾರ್ಯಕ್ರಮದ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು . ಕಸ್ತೂರ್ಬಾ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ಅವಿನಾಶ್ ಶೆಟ್ಟಿ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು.ಮುಖ್ಯ ಅತಿಥಿಯಾಗಿ ಕೆಎಂಸಿ ಮಣಿಪಾಲದ ಸಹ ಡೀನ್ ಡಾ.ಎಸ್.ಎಸ್. ಪ್ರಸಾದ್ ಪಾಲ್ಗೊಂಡಿದ್ದರು.
Kshetra Samachara
07/01/2025 05:31 pm