ಹಾವೇರಿ : ಬಸ್ ಟಿಕೆಟ್ ದರ ಏರಿಕೆ ಖಂಡಿಸಿ ಹಾವೇರಿಯಲ್ಲಿ ಜೆಡಿಎಸ್ ವಿಭಿನ್ನವಾಗಿ ಪ್ರತಿಭಟನೆ ನಡೆಸಿತು. ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ಜೆಡಿಎಸ್ ಕಾರ್ಯಕರ್ತರು ಕಾರಿಗೆ ಹಗ್ಗಕಟ್ಟಿ ಎಳೆದು ಆಕ್ರೋಶ ವ್ಯಕ್ತಪಡಿಸಿದರು.
ಸರ್ಕಾರ ಶಕ್ತಿ ಯೋಜನೆಯಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ನೀಡಿ, ಪುರುಷರ ಟಿಕೆಟ್ ದರದಲ್ಲಿ ಏರಿಕೆ ಮಾಡಿದೆ. ಒಂದು ಕೈಯಲ್ಲಿ ಕೊಟ್ಟು ಮತ್ತೊಂದು ಕೈಯಲ್ಲಿ ಕಸಿದುಕೊಳ್ಳುತ್ತಿದೆ ಎಂದು ಸಿ.ಎಂ, ಡಿ.ಸಿ.ಎಂ ಮತ್ತು ಸಾರಿಗೆ ಸಚಿವರ ವಿರುದ್ಧ ಘೋಷಣೆ ಕೂಗಿದರು.
PublicNext
07/01/2025 05:36 pm