ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹಿರಿಯೂರು: ಅನಿಲ ಸೋರಿಕೆ ತಡೆ ಅಣಕು ಕಾರ್ಯಾಚರಣೆ ವೀಕ್ಷಿಸಿದ ಜಿಲ್ಲಾಧಿಕಾರಿ ವೆಂಕಟೇಶ್

ಹಿರಿಯೂರು: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಜೆ.ಜೆ.ಹಳ್ಳಿ ಹೋಬಳಿ ದಿಂಡಾವರ ಪಂಚಾಯಿತಿ ವ್ಯಾಪ್ತಿಯ ಮಾದೇನಹಳ್ಳಿ ಗ್ರಾಮದಲ್ಲಿ ಮಂಗಳವಾರ ಅನಿಲ ಸೋರಿಕೆ ಸಂದರ್ಭದ ಬಿಕ್ಕಟ್ಟು ನಿರ್ವಹಣೆಗೆ ಸಂಬಂಧಿಸಿದಂತೆ ಅಣಕು ಪ್ರಾತ್ಯಕ್ಷಿಕೆ ಕಾರ್ಯಚರಣೆ ನಡೆಸಲಾಯಿತು.

ಅನಿಲ ಸೋರಿಕೆ ತಡೆಗಟ್ಟುವಿಕೆ ತುರ್ತು ಅಣಕು ಕಾರ್ಯಾಚರಣೆಯನ್ನು ಹಾಸನ-ಚೆರ್ಲಪಲ್ಲಿ ಎಲ್‍ಪಿಜಿ ಪೈಪ್‍ಲೈನ್‍ನ ಹೆಚ್‍ಸಿಪಿಎಲ್ ಚೈನೇಜ್ 123ರಲ್ಲಿ ಆಫ್‍ಸೈಟ್-ಅಣುಕು ಪ್ರಾತ್ಯಕ್ಷಿಕೆ ಹಮ್ಮಿಕೊಳ್ಳಲಾಯಿತು.

ಅನಿಲ ಸೋರಿಕೆ ಪ್ರಾತ್ಯಕ್ಷಿಕೆ: ಅಣಕು ಪ್ರದರ್ಶನದಡಿ ಹಾಸನ-ಚೆರ್ಲಪಲ್ಲಿ ಎಲ್‍ಪಿಜಿ ಪೈಪ್‍ಲೈನ್‍ನ ಹೆಚ್‍ಸಿಪಿಎಲ್ ಚೈನೇಜ್ 123ರ

ಗ್ರಾಮದಲ್ಲಿ ಅನಿಲ ಸೋರಿಕೆಯಾದ ಮಾಹಿತಿ ಭದ್ರತಾ ಸಿಬ್ಬಂದಿಯಿಂದ ನಿಯಂತ್ರಣ ಕೊಠಡಿ ಅಧಿಕಾರಿಗೆ ವಾಕಿಟಾಕಿ ಮೂಲಕ ಪರಸ್ಪರ ಸಂವಹನ ನಡೆಯುತ್ತದೆ. ತಕ್ಷಣವೇ ಭದ್ರತಾ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ, ಅನಿಲ ಸೋರಿಕೆಯಾದ ಸ್ಥಳದ ಸುತ್ತಮುತ್ತ ತುರ್ತು ಪರಿಸ್ಥಿತಿ ಘೋಷಿಸುತ್ತಾರೆ. ತಕ್ಷಣವೇ ಅನಿಲ ಸೋರಿಕೆ ಸಿಬ್ಬಂದಿ, ಅಂಬುಲೆನ್ಸ್ ಹಾಗೂ ವೈದ್ಯಕೀಯ ತಂಡವೂ ಬರುತ್ತದೆ. ನಂತರ ಸಿಬ್ಬಂದಿ ಅನಿಲ ಸೋರಿಕೆಯಾದ ಸ್ಥಳ ಪರಿಶೀಲಿಸಿ ಅಸ್ವಸ್ಥಗೊಂಡ ಭದ್ರತಾ ಸಿಬ್ಬಂದಿಯನ್ನು ವೈದ್ಯಕೀಯ ತಂಡದವರು ಪ್ರಥಮ ಚಿಕಿತ್ಸೆ ನೀಡಿ ಅಂಬುಲೆನ್ಸ್‍ನಲ್ಲಿ ಆಸ್ಪತ್ರೆಗೆ ಸಾಗಿಸುತ್ತಾರೆ. ಹೀಗೆ ಭದ್ರತೆ, ರಕ್ಷಣೆ, ಅಗ್ನಿಶಾಮಕದಳದ ಸಿಬ್ಬಂದಿಯ ಕಾರ್ಯಾಚರಣೆ ಹಂತ ಹಂತವಾಗಿ ನಡೆಯುತ್ತದೆ. ಅಂತಿಮವಾಗಿ ಎಲ್‍ಪಿಜಿ ಸೋರಿಕೆಯನ್ನು ಯಶಸ್ವಿಯಾಗಿ ನಿಲ್ಲಿಸಲಾಗಿದೆ ಎಂದು ಅಧಿಕಾರಿಗಳಿಗೆ ದೃಢಪಡಿಸಲಾಯಿತು. ನಂತರ ಸೈರನ್ ಮೊಳಗಿಸಿ, ಹಸಿರು ಬಾವುಟ ಹಾರಿಸಲಾಯಿತು.

ಚಿತ್ರದುರ್ಗ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ, ಹಾಸನದ ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೋರೇಷನ್ ಲಿಮಿಟೆಡ್ ಸಹಯೋಗದೊಂದಿಗೆ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಬಲವರ್ಧನೆ ಸಂಬಂಧ ಆಯೋಜಿಸಲಾಗಿದ್ದ ಅಣಕು ಪ್ರದರ್ಶನ  ಕಾರ್ಯಕ್ರಮ ವೀಕ್ಷಿಸಿ ಮಾತನಾಡಿದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರಾದ ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಅನಿಲ ಸೋರಿಕೆ  ಸಂದರ್ಭದಲ್ಲಿನ  ಬಿಕ್ಕಟ್ಟು ಪರಿಸ್ಥಿತಿಯನ್ನು, ಸಂಭವಿಸುವ ಅನಾಹುತವನ್ನು ಯಾವ ರೀತಿಯಾಗಿ ನಿಭಾಯಿಸುವುದು ಹಾಗೂ ಯಾವ ರೀತಿಯ ಮುನ್ನೆಚ್ಚರಿಕೆ ಕ್ರಮಕೈಗೊಳ್ಳಬೇಕು ಎಂಬುದನ್ನು ಅಣಕು ಪ್ರದರ್ಶನದ ಮೂಲಕ ಸಾರ್ವಜನಿಕರಿಗೆ ಜಾಗೃತಿ ಮೂಡಿಸಲಾಗಿದೆ ಎಂದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಜೆ.ಸೋಮಶೇಖರ್, ಹಿರಿಯೂರು ತಹಶೀಲ್ದಾರ್ ರಾಜೇಶ್ ಕುಮಾರ್, ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಸತೀಶ್, ಪೌರಾಯುಕ್ತ ವಾಸೀಂ, ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಸೋಮಶೇಖರ್ ವಿ ಅಗಡಿ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಜಿ.ಪಿ.ರೇಣುಪ್ರಸಾದ್, ಪೊಲೀಸ್ ಇನ್ಸ್‍ಪೆಕ್ಟರ್ ಕಾಳಿಕೃಷ್ಣ, ಜಿಲ್ಲಾ ವಿಪತ್ತು ನಿರ್ವಹಣಾ  ಪರಿಣಿತ ಹೆಚ್.ಎನ್.ಸಮರ್ಥ್, ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೋರೇಷನ್ ಲಿಮಿಟೆಡ್‍ನ ಚೀಪ್ ಸ್ಟೇಷನ್ ಮ್ಯಾನೇಜರ್ ಅಭಿಷೇಕ್, ಭದ್ರತಾ ಅಧಿಕಾರಿ ಟಿ.ಎಂ.ಶಿವಕುಮಾರ್ ಸೇರಿದಂತೆ ಮತ್ತಿತರರು ಇದ್ದರು.

Edited By : PublicNext Desk
Kshetra Samachara

Kshetra Samachara

07/01/2025 05:49 pm

Cinque Terre

2 K

Cinque Terre

0

ಸಂಬಂಧಿತ ಸುದ್ದಿ