ಮಡಿಕೇರಿ: ಹುಲಿ ದಾಳಿಯಿಂದ ಹಸುವೊಂದು ಸಾವನ್ನಪ್ಪಿರುವ ಘಟನೆ ಕೊಡಗು ಜಿಲ್ಲೆ ಪೊನ್ನಂಪೇಟೆಯ ಮಾಯಮುಡಿ ಗ್ರಾಮದಲ್ಲಿ ನಡೆದಿದೆ.
ಕೊಂಗಂಡ ನಂಜಪ್ಪ ಎಂಬುವರಿಗೆ ಸೇರಿದ ಹಸು ಇದಾಗಿದ್ದು, ಗ್ರಾಮದಲ್ಲಿ ಆತಂಕ ಮನೆ ಮಾಡಿದೆ. ಸ್ಥಳಕ್ಕೆ ಅರಣ್ಯ ಅಧಿಕಾರಿಗಳು ಹಾಗೂ ಗ್ರಾ.ಪಂ ಪ್ರತಿನಿಧಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹುಲಿ ಮಾಯಮುಡಿ ವ್ಯಾಪ್ತಿಯಲ್ಲೇ ಇರುವುದರಿಂದ ಗ್ರಾಮಸ್ಥರು, ವಿದ್ಯಾರ್ಥಿಗಳು ಹಾಗೂ ಕಾರ್ಮಿಕರು ಎಚ್ಚರಿಕೆಯಿಂದ ಇರುವಂತೆ ಗ್ರಾಮ ಪಂಚಾಯತ್ ಎಚ್ಚರಿಕೆ ನೀಡಿದೆ.
PublicNext
07/01/2025 06:59 pm