ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿಕ್ಕಮಗಳೂರಿನಲ್ಲಿ ನಾಳೆ ಹಲವು ಮಾರ್ಗಗಳ ಸಂಚಾರ ಬದಲಾವಣೆ, ಮದ್ಯ ಮಾರಾಟ ನಿಷೇಧ

ಚಿಕ್ಕಮಗಳೂರು: ನಾಳೆ ನಗರದಲ್ಲಿ ಭೀಮಾ ಕೊರೆಗಾಂವ್ ವಿಜಯೋತ್ಸವ ನಡೆಯಲ್ಲಿರುವ ಹಿನ್ನೆಲೆಯಲ್ಲಿ ಎಲ್ಲೆಡೆ ಬ್ಯಾನರ್ ಬಂಟಿಂಗ್ಸ್ ಗಳು ರಾರಾಜಿಸುತ್ತಿದ್ದು, ನಗರ ಸಂಪೂರ್ಣ ನೀಲಿಮಯವಾಗಿದೆ. ವಿಜಯೋತ್ಸವಕ್ಕೆ ಸಕಲ ಸಿದ್ಧತೆಗಳು ನಡೆದಿದ್ದು ಎಂ.ಜಿ ರಸ್ತೆಯಲ್ಲಿ ಬೃಹತ್ ವಿಜಯೋತ್ಸವ ಸಾಗಲಿದ್ದು, ಜಿಲ್ಲೆಯ ಹತ್ತಾರು ದಲಿತ ಸಂಘಟನೆಗಳ ಸಾವಿರಾರು ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ. ಬಳಿಕ ಕುವೆಂಪು ಕಲಾ ಮಂದಿರದಲ್ಲಿ ಸಮಾವೇಶ ನಡೆಯಲಿದ್ದು, ಮಹಾ ನಾಯಕ ಧಾರಾವಾಹಿಯ ಅಂಬೇಡ್ಕರ್ ಪಾತ್ರದಾರಿ ಅಥರ್ವ ಕಾರ್ವೆ, ಭೀಮ್ ಆರ್ಮಿ ಸಂಸ್ಥಾಪಕ ಚಂದ್ರಶೇಖರ್ ಆಜಾದ್ ರಾವಣ್, ಸಂಸದ ಶಶಿಕಾಂತ್ ಸೆಂಥಿಲ್ ಸೇರಿದಂತೆ ಹಲವರು ಕಾರ್ಯಕ್ರಮಕ್ಕೆ ಆಗಮಿಸಲಿದ್ದಾರೆ

ಭೀಮ ಕೊರೆಗಾಂವ್ ವಿಜಯೋತ್ಸವ ಹಿನ್ನೆಲೆಯಲ್ಲಿ ನಗರದ ಕೆಲವು ರಸ್ತೆಗಳ ಮಾರ್ಗ ಬದಲಾವಣೆ ಮಾಡಿ, ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಎಂ.ಜಿ ರಸ್ತೆಯಲ್ಲಿ ಸಂಪೂರ್ಣ ವಾಹನಗಳ ಪಾರ್ಕಿಂಗ್ ನಿಷೇಧಿಸಲಾಗಿದ್ದು, ಟೌನ್ ಕ್ಯಾಂಟೀನ್, ಕೆಇಬಿ ಸರ್ಕಲ್ ಹಾಗೂ ಬಸವನಹಳ್ಳಿ ಮುಖ್ಯ ರಸ್ತೆಯಲ್ಲೂ ಕೂಡ ವಾಹನಗಳ ನಿಲುಗಡೆಗೆ ನಿರ್ಬಂಧ ಹೇರಲಾಗಿದೆ. ಮಾರ್ಕೆಟ್ ರಸ್ತೆಯನ್ನು ಒನ್ ವೇ ಮಾಡಲಾಗಿದ್ದು ಸುಗಮ ಸಂಚಾರಕ್ಕೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲಾಗಿದೆ. ನಾಳೆ ನಡೆಯುವ ಕಾರ್ಯಕ್ರಮದಲ್ಲಿ ಇಪ್ಪತ್ತು ಸಾವಿರ ಜನರು ಆಗಮಿಸುವ ನಿರೀಕ್ಷೆ ಇದ್ದು ಬೆಳಗ್ಗೆ 6 ಗಂಟೆಯಿಂದ ರಾತ್ರಿ 11 ವರೆಗೆ ಚಿಕ್ಕಮಗಳೂರು ನಗರ ಹಾಗೂ ಬಸವನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಸುತ್ತಮುತ್ತಲಿನ ಐದು ಕಿಲೋಮೀಟರ್ ವ್ಯಾಪ್ತಿಯಲ್ಲಿ ಎಲ್ಲಾ ರೀತಿಯ ಮಧ್ಯ ಮಾರಾಟ ಶೇಖರಣೆ ಮತ್ತು ಸಾಗಾಣಿಕೆಯನ್ನು ನಿಷೇಧಿಸಿ ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶಿಸಿದ್ದಾರೆ.

Edited By : PublicNext Desk
PublicNext

PublicNext

07/01/2025 07:29 pm

Cinque Terre

12.4 K

Cinque Terre

0

ಸಂಬಂಧಿತ ಸುದ್ದಿ