ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ನೆರೆಪೀಡಿತ ಪ್ರದೇಶದಲ್ಲಿ ಸೇತುವೆ ಮತ್ತು ರಸ್ತೆ ಕಾಮಗಾರಿಗೆ ಶಾಸಕ ಯಶ್ ಪಾಲ್ ಸುವರ್ಣ ಚಾಲನೆ

ಉಡುಪಿ: ಉಡುಪಿ ನಗರಸಭೆಯ ಕೊಡಂಕೂರು ವಾರ್ಡಿನ ನೆರೆಪೀಡಿತ ತಾರಕಟ್ಟ ಪ್ರದೇಶದಲ್ಲಿ ಸುಮಾರು 2.50 ಕೋಟಿ ರೂ. ವೆಚ್ಚದಲ್ಲಿ ಇಂದ್ರಾಣಿ ನದಿಗೆ ನೂತನ ಸೇತುವೆ ಹಾಗೂ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಗುದ್ದಲಿ ಪೂಜೆ ನೆರವೇರಿಸಿ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಯಶ್ ಪಾಲ್ ಸುವರ್ಣ ಕಳೆದ ಹಲವು ದಶಕಗಳ ಸ್ಥಳೀಯರ ಬೇಡಿಕೆಯಂತೆ ಕರ್ನಾಟಕ ನೀರಾವರಿ ನಿಗಮದ ಮೂಲಕ 2.50 ಕೋಟಿ ವೆಚ್ಚದಲ್ಲಿ ಸೇತುವೆ ನಿರ್ಮಿಸಿ, ಸಂಪರ್ಕ ರಸ್ತೆ ಅಭಿವೃದ್ಧಿಪಡಿಸುವ ಕಾಮಗಾರಿಗೆ ಚಾಲನೆ ನೀಡಲಾಗಿದೆ.ಮಳೆಗಾಲದಲ್ಲಿ ನೀರು ಸರಾಗ ಹರಿದು ನೆರೆ ಸೃಷ್ಟಿಯಾಗುವ ಸಮಸ್ಯೆ ಪರಿಹಾರವಾಗಲಿದ್ದು ನೂತನ ರಸ್ತೆ ಕೊಡಂಕೂರಿನಿಂದ ಮೂಡಬೆಟ್ಟು ಭಾಗಕ್ಕೆ ನೇರ ಸಂಪರ್ಕ ಕಲ್ಪಿಸಲಿದೆ ಎಂದರು.

ಈ ಸಂದರ್ಭದಲ್ಲಿ ಉಡುಪಿ ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ, ಉಪಾಧ್ಯಕ್ಷೆ ರಜನಿ ಹೆಬ್ಬಾರ್ ಮತ್ತಿತರರು ಇದ್ದರು.

Edited By : PublicNext Desk
Kshetra Samachara

Kshetra Samachara

07/01/2025 07:58 pm

Cinque Terre

1.25 K

Cinque Terre

0

ಸಂಬಂಧಿತ ಸುದ್ದಿ