ಧಾರವಾಡ: ಎಚ್‌ಎಂಪಿವಿ ವೈರಸ್ ಹರಡುತ್ತಿರುವ ಹಿನ್ನೆಲೆ ರಾಜ್ಯ ಆರೋಗ್ಯ ಇಲಾಖೆ ಮಾರ್ಗಸೂಚಿಗಳನ್ನು ಹೊರಡಿಸಿದೆ. ಈ ಹಿನ್ನೆಲೆಯಲ್ಲಿ ಧಾರವಾಡ ಜಿಲ್ಲಾ ಆಸ್ಪತ್ರೆಗೆ ಜಿಲ್ಲಾಧಿಕಾರಿ ದಿವ್ಯ ಪ್ರಭು ಭೇಟಿ ನೀಡಿ ವಿವಿಧ ಸೌಲಭ್ಯಗಳನ್ನು ಪರಿಶೀಲಿಸಿದರು.
ಧಾರವಾಡ ಜಿಲ್ಲಾಸ್ಪತ್ರೆಯ ವಿವಿಧ ವಾರ್ಡ್ ಹಾಗೂ ಆಕ್ಸಿಜನ್ ಘಟಕಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಲ್ಲದೇ ವಿವಿಧ ವಾರ್ಡ್‌ಗಳಿಗೆ ಭೇಟಿ ನೀಡಿ ರೋಗಿಗಳ ಸಮಸ್ಯೆಗಳನ್ನು ಆಲಿಸಿದರು.
ಈ ವೇಳೆ ಮಾತನಾಡಿದ ಜಿಲ್ಲಾಧಿಕಾರಿ ದಿವ್ಯ ಪ್ರಭು, ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಬಿಡುಗಡೆಯಾದ ಹಿನ್ನೆಲೆಯಲ್ಲಿ ಜಿಲ್ಲಾಸ್ಪತ್ರೆಗೆ ಭೇಟಿ ನೀಡಲಾಗಿದೆ. ಇದು ಸಾಮಾನ್ಯವಾಗಿ ಬರುವ ವೈರಸ್. ಯಾರೂ ಆತಂಕಪಡುವ ಅಗತ್ಯವಿಲ್ಲ. ಕೆಮ್ಮು, ಜ್ವರ, ನೆಗಡಿಯ ಲಕ್ಷಣ ಇರುತ್ತದೆ. ಬೇರೆಯವರಿಗೆ ಹರಡದಂತೆ ನೋಡಿಕೊಳ್ಳಬೇಕು. ಪ್ರತಿವಾರ ನಾವು ಜಿಲ್ಲಾ ವ್ಯಾಪ್ತಿಯಲ್ಲಿ ಪರಿಶೀಲನೆ ಮಾಡುತ್ತೇವೆ. ನಮ್ಮ ಜಿಲ್ಲಾಸ್ಪತ್ರೆಯಲ್ಲಿ ಐಸೋಲೇಷನ್ ವಾರ್ಡ್ ಮೀಸಲು ಇಡಲು ಸೂಚಿಸಲಾಗಿದೆ ಎಂದರು.
ಒಟ್ಟಾರೆ ರಾಜ್ಯ ಆರೋಗ್ಯ ಇಲಾಖೆ ಮಾರ್ಗಸೂಚಿ ಹೊರಡಿಸಿದ ಬೆನ್ನಲ್ಲೇ ಧಾರವಾಡದಲ್ಲೂ ಎಚ್‌ಎಂಪಿವಿ ವೈರಸ್ ಬಗ್ಗೆ ಜಿಲ್ಲಾಡಳಿತ ಮುಂಜಾಗೃತಾ ಕ್ರಮ ಕೈಗೊಳ್ಳಲು ಮುಂದಾಗಿದೆ.
Kshetra Samachara
07/01/2025 08:22 pm