ಧಾರವಾಡ: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಮೇಲೆ ದಾಖಲಾಗಿರುವ ಪೋಕ್ಸೋ ಪ್ರಕರಣದ ವಿಚಾರಣೆಯನ್ನು ಧಾರವಾಡ ಹೈಕೋರ್ಟ್ ಜನವರಿ 10ಕ್ಕೆ ಮುಂದೂಡಿದೆ.
ಯಡಿಯೂರಪ್ಪ ಅವರ ಮೇಲಿನ ಪೋಕ್ಸೋ ಪ್ರಕರಣದ ವಿಚಾರಣೆ ಬೆಂಗಳೂರು ಹೈಕೋರ್ಟ್‌ನಲ್ಲಿ ನಡೆಯುತ್ತಿದೆ. ಮಂಗಳವಾರ ನ್ಯಾಯಮೂರ್ತಿ ನಾಗಪ್ರಸನ್ನ ಅವರು ಧಾರವಾಡ ಹೈಕೋರ್ಟ್‌ನಲ್ಲಿ ಕರ್ತವ್ಯ ನಿರ್ವಹಿಸಿದ್ದರಿಂದ ಬೆಂಗಳೂರಿನಿಂದಲೇ ಯಡಿಯೂರಪ್ಪ ಅವರ ಪರ ವಕೀಲರಾದ ಸಿ.ವಿ.ನಾಗೇಶ ಅವರು ವೀಡಿಯೋ ಕಾನ್ಫರನ್ಸ್ ಮೂಲಕ ಪ್ರಕರಣದ ವಿಚಾರಣೆಗೆ ಹಾಜರಾದರು.
ಈ ಪ್ರಕರಣದ ಮುಂದಿನ ವಿಚಾರಣೆಯನ್ನು ಬೆಂಗಳೂರಿನಲ್ಲೇ ನಡೆಸಲಾಗುವುದು ಎಂದು ಹೇಳಿ ನ್ಯಾಯಮೂರ್ತಿ ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠವು ವಿಚಾರಣೆಯನ್ನು ಜನವರಿ 10ಕ್ಕೆ ಮುಂದೂಡಿದೆ.
ಯಡಿಯೂರಪ್ಪ ಅವರು ತಮ್ಮ ಮೇಲೆ ದಾಖಲಾಗಿರುವ ಎಫ್‌ಐಆರ್ ರದ್ದುಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದು, ಇಷ್ಟು ದಿನ ಬೆಂಗಳೂರಿನಲ್ಲೇ ಈ ಅರ್ಜಿ ವಿಚಾರಣೆ ನಡೆದಿತ್ತು. ಆದರೆ, ನ್ಯಾಯಮೂರ್ತಿ ನಾಗಪ್ರಸನ್ನ ಅವರು ಮಂಗಳವಾರ ಧಾರವಾಡ ಹೈಕೋರ್ಟ್‌ನಲ್ಲಿ ಕರ್ತವ್ಯ ನಿರ್ವಹಿಸಿದ್ದರಿಂದ ಇಲ್ಲಿ ಇಂದು ಈ ಅರ್ಜಿ ವಿಚಾರಣೆ ನಡೆಯಿತು.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
07/01/2025 08:31 pm