ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಡಿಕೇರಿ : ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಓಮಿನಿ ಪಲ್ಟಿ - ಹಲವರಿಗೆ ಗಾಯ

ನಾಪೋಕ್ಲು : ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಓಮಿನಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ತೋಟದೊಳಗೆ ಉರುಳಿಬಿದ್ದಿದೆ. ಪರಿಣಾಮ ಹಲವರು ಗಾಯಗೊಂಡ ಘಟನೆ ಕೊಡಗು ಜಿಲ್ಲೆ ನಾಪೋಕ್ಲು ವಿರಾಜಪೇಟೆ ಮುಖ್ಯರಸ್ತೆಯ ಬಾವಲಿ ಗ್ರಾಮದಲ್ಲಿ ನಡೆದಿದೆ.

ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ಸಂದರ್ಭ ವಿರಾಜಪೇಟೆ ಮುಖ್ಯರಸ್ತೆಯಿಂದ ಬಾವಲಿ ಪಾರಾಣೆ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಬಳಿ ನಿಯಂತ್ರಣ ತಪ್ಪಿ ಈ ಅಪಘಾತ ಸಂಭವಿಸಿದೆ. ಅಪಘಾತದಿಂದ ಕಾರು ಸಂಪೂರ್ಣ ಜಖಂಗೊಂಡಿದ್ದು ಕಾರಿನಲ್ಲಿದ್ದ ಕಾರ್ಮಿಕರು ಮಕ್ಕಳು ಸೇರಿದಂತೆ ಹಲವರಿಗೆ ಗಾಯಗಳಾಗಿವೆ.

ಗಾಯಾಳುಗಳಿಗೆ ನಾಪೋಕ್ಲು ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗಿದೆ. ಕಾರಿನಲ್ಲಿದ್ದ ಕಾರ್ಮಿಕ ಆಶಿಕ್ ಅವರು ನೀಡಿದ ದೂರಿನ ಅನ್ವಯ ನಾಪೋಕ್ಲು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

Edited By : Ashok M
PublicNext

PublicNext

07/01/2025 08:54 pm

Cinque Terre

46.34 K

Cinque Terre

0

ಸಂಬಂಧಿತ ಸುದ್ದಿ