ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸುರತ್ಕಲ್: ಮುಮ್ತಾಝ್ ಅಲಿ ಆತ್ಮಹತ್ಯೆ ಪ್ರಕರಣ- 6ಮಂದಿಯ ವಿರುದ್ಧ ಆರೋಪ ಪಟ್ಟಿ ಸಲ್ಲಿಕೆ

ಸುರತ್ಕಲ್: ಉದ್ಯಮಿ, ಮುಸ್ಲಿಂ ಧಾರ್ಮಿಕ ಮುಖಂಡ ಮುಮ್ತಾಝ್ ಅಲಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿತೆ ರಹಮತ್ ಸೇರಿ ಒಟ್ಟು 6 ಮಂದಿ ಆರೋಪಿಗಳ ವಿರುದ್ಧ ಪೊಲೀಸ್ ನಿರೀಕ್ಷ ಮಹೇಶ್ ಪ್ರಸಾದ್ ಸೋಮವಾರ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದ್ದಾರೆಂಬ ಬಗ್ಗೆ ವರದಿಯಾಗಿದೆ.

ಪ್ರಕರಣದ ಸಂಬಂಧ 100ಕ್ಕೂ ಅಧಿಕ ಸಾಕ್ಷಿಗಳನ್ನು ವಿಚಾರಣೆಗೆ ಒಳಪಡಿಸಿದ್ದಾರೆ. ಸುರತ್ಕಲ್ ಪೊಲೀಸರು, ಸೋಮವಾರ ಸಂಜೆ ಮಂಗಳೂರಿನ ಜೆಎಂಎಫ್‌ಸಿ ನ್ಯಾಯಾಲಯಕ್ಕೆ 600ಕ್ಕೂ ಅಧಿಕ ಪುಟಗಳ ಆರೋಪ ಪಟ್ಟಿ ಸಲ್ಲಿಸಿದ್ದಾರೆ. ಆರೋಪ ಪಟ್ಟಿಯಲ್ಲಿ ಪ್ರಮುಖ ಆರೋಪಿ ಸುರತ್ಕಲ್ ಕೃಷ್ಣಾಪುರ 7ನೇ ಬ್ಲಾಕ್ ನಿವಾಸಿ ರಹಮತ್ ಮತ್ತು ಆಕೆಯ ಪತಿ ಪ್ರಕರಣದ 5ನೇ ಆರೋಪಿ ಶುಐಬ್, ಪ್ರಕರಣ ಎ2 ಆರೋಪಿ ಅಬ್ದುಲ್ ಸತ್ತಾರ್, ಎ3 ಆರೋಪಿ ನಂದಾವರ ನಿವಾಸಿ ಕಲಂದರ್ ಶಾಫಿ, ಎ4 ಆರೋಪಿ ಕೃಷ್ಣಾಪುರ ನಿವಾಸಿ ಮುಸ್ತಫಾ ಹಾಗೂ 6ನೇ ಆರೋಪಿ ಸತ್ತಾರ್ ನ ಕಾರು ಚಾಲಕ ಸಿರಾಜ್ ವಿರುದ್ಧ ಪ್ರಕರಣದ ತನಿಖಾಧಿಕಾರಿಯಾಗಿದ್ದ ಸುರತ್ಕಲ್‌ ಠಾಣೆಯ ಪೊಲೀಸ್ ನಿರೀಕ್ಷ ಮಹೇಶ್ ಪ್ರಸಾದ್ ಅವರು ಆರೋಪ ಪಟ್ಟಿ ಸಲ್ಲಿಸಿದ್ದಾರೆ ಎಂದು ತಿಳಿದು ಬಂದಿದೆ.

2024ರ ಅ.7ರಂದು ಮಸ್ತಾಝ್ ಅಲಿಯವರ ಕಾರು ಅಪಘಾತಕ್ಕೀಡಾದ ಸ್ಥಿತಿಯಲ್ಲಿ ಕೂಳೂರು ಸೇತುವೆಯಲ್ಲಿ ಪತ್ತೆಯಾಗಿತ್ತು. ಅವರು ಫಲ್ಗುಣಿ ನದಿಗೆ ಹಾರಿರುವ ಅನುಮಾನ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಅವರ ಪುತ್ರಿ ನಾಪತ್ತೆ ಪ್ರಕರಣ ದಾಖಲಿಸಿದ್ದರು. ಬಳಿಕ ಸಹೋದರ ಹೈದರ್ ಅಲಿ ಅವರು, ರಹಮತ್, ಅಬ್ದುಲ್ ಸತ್ತಾರ್, ಕಲಂದರ್ ಶಾಫಿ, ಮುಸ್ತಫಾ, ಶುಐಬ್, ಸಿರಾಜ್ ಎಂಬವರು ಮಾನಸಿಕ ಕಿರುಕುಳ ನೀಡುತ್ತಿದ್ದರು ಎಂದು ದೂರು ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ಅವರು ಆತ್ಮಹತ್ಯೆಗೈದಿರುವ ಕುರಿತು ಶಂಕೆ ವ್ಯಕ್ತಪಡಿಸಿ ದೂರು ನೀಡಿದ್ದರು.

Edited By : Abhishek Kamoji
PublicNext

PublicNext

07/01/2025 10:28 pm

Cinque Terre

25.92 K

Cinque Terre

0

ಸಂಬಂಧಿತ ಸುದ್ದಿ