ಬೈಂದೂರು: ರಾಷ್ಟ್ರೀಯ ಹೆದ್ದಾರಿಯ ಡಿವೈಡರನ ಇಂಡಿಕೇಟರ್ ಲೈಟ್ ಆಫ್: ವಾಹನ ಸವಾರರಿಗೆ ಕಂಟಕ .
ಬೈಂದೂರು: ಕಳೆದ ಎರಡು ತಿಂಗಳಿನಿಂದ ಅರಾಟೆ ಸೇತುವೆ ದುರಸ್ತಿ ಮಾಡುವ ಉದ್ದೇಶದಿಂದ ಉಡುಪಿ ಜಿಲ್ಲಾಡಳಿತ ಸೇತುವೆ ಮೇಲೆ ವಾಹನ ಸಂಚಾರಕ್ಕೆ ನಿರ್ಬಂಧ ಹೇರಿದ ಹಿನ್ನೆಲೆಯಲ್ಲಿ , ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕುಂದಾಪುರ ಕಡೆಯಿಂದ ಬೈಂದೂರು ಕಡೆಗೆ ಸಾಗುವ ವಾಹನಗಳಿಗೆ ಕನ್ನಡ ಕುದ್ರು ಎಂಬಲ್ಲಿ ಡಿವೈಡರ್ ತೆರೆದಿದ್ದು, ರಾತ್ರಿಯ ವೇಳೆಯಲ್ಲಿ ಡಿವೈಡರ್ ನ ಬಳಿ ಅಳವಡಿಸಿದ ಇಂಡಿಕೇಟರ್ ದೀಪ ಉರಿಯದೆ ರಾತ್ರಿಯ ವೇಳೆಯಲ್ಲಿ ಸಂಚರಿಸುವ ವಾಹನ ಸವಾರರಿಗೆ ಕಂಟಕ ಎದುರಾಗಿದೆ,
ಸೋಮವಾರ ರಾತ್ರಿ ವೇಳೆ ಹಕ್ಲಾಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಚೇತನ್ ಮೊಗವೀರ ಬರುವಾಗ ಡಿವೈಡರ್ ನ ಬಳಿ ಅಳವಡಿಸಿದ ಇಂಡಿಕೇಟರ್ ಹಾಳಾಗಿದ್ದು ಕಾರ್ಯ ನಿರ್ವಹಿಸುತ್ತಿಲ್ಲ, ರಾತ್ರಿಯ ವೇಳೆ ಸಂಚರಿಸುವ ವಾಹನ ಸವಾರರಿಗೆ ಕಂಟಕವಾಗಿರುವ ರಾಷ್ಟ್ರೀಯ ಹೆದ್ದಾರಿ ಗುತ್ತಿಗೆದಾರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ.
ಇಲ್ಲಿ ಆಗುತ್ತಿರುವ ಸಮಸ್ಯೆಯ ಬಗ್ಗೆ ನಿಮ್ಮ ಪಬ್ಲಿಕ್ ನೆಕ್ಸ್ಟ್ ಗೆ ಮಾಹಿತಿ ನೀಡಿದ್ದಾರೆ.
ಮುಂದಿನ ದಿನದಲ್ಲಿ ಇಂತಹ ಘಟನೆಗಳು ಹೀಗೆ ಮುಂದುವರೆದರೆ ಸಾರ್ವಜನಿಕರ ಪ್ರಾಣದ ಜೊತೆ ಚೆಲ್ಲಾಟವಾಡುತ್ತಿರುವ ಗುತ್ತಿಗೆದಾರರ ವಿರುದ್ಧ ಪ್ರತಿಭಟನೆ ಮಾಡಲಾಗುವುದು ಎಂದು ಹೇಳಿದರು.
ತಕ್ಷಣ ಸಂಬಂಧಪಟ್ಟ ಇಲಾಖೆ, ಹಾಗೂ ಜಿಲ್ಲಾಡಳಿತ ಗುತ್ತಿಗೆದಾರರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹ ಮಾಡಿದ್ದಾರೆ.
Kshetra Samachara
07/01/2025 10:35 pm