ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹಿರಿಯುರು: ವಿವಿ ಸಾಗರ ಜಲಾಶಯಕ್ಕೆ ಬಾಗಿನ ಅರ್ಪಣೆಗೆ ಮುಖ್ಯಮಂತ್ರಿಗೆ ಆಹ್ವಾನ ನೀಡಿದ ಸಚಿವ

ಹಿರಿಯುರು:ಜಿಲ್ಲೆಯ ಜನರ ಜೀವನಾಡಿ ವಾಣಿವಿಲಾಸ ಸಾಗರ ಜಲಾಶಯಕ್ಕೆ ಬಾಗಿನ ಅರ್ಪಿಸಲು ಆಗಮಿಸುವಂತೆ ರಾಜ್ಯದ ಮುಖ್ಯಮಂತ್ರಿ ಸಿದ್ಧರಾಮಯ್ಯ ರವರನ್ನು ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಸುಧಾಕರ್ ಅವರು ಅಹ್ವಾನಿಸಿದ್ದಾರೆ.

ಭದ್ರಾ ಮೇಲ್ದಂಡೆ ಯೋಜನೆ ಸಾಕಾರದಿಂದ ವಾಣಿವಿಲಾಸ ಸಾಗರ ಜಲಾಶಯ ಭರ್ತಿಯಾಗಿದ್ದು, ಕೋಡಿ ಬೀಳಲು ಕ್ಷಣಗಣನೆ ಶುರುವಾಗಿದೆ. ಶತಮಾನದ ಇತಿಹಾಸವಿರುವ ವಾಣಿವಿಲಾಸ ಸಾಗರ ಜಲಾಶಯ 3ನೇ ಬಾರಿಗೆ ಭರ್ತಿಯಾಗುತ್ತಿದ್ದು, ಜಲಾಶಯಕ್ಕೆ ಬಾಗಿನ ಅರ್ಪಿಸಲು ಆಹ್ವಾನಿಸಲಾಗಿದೆ.ಭದ್ರೆ ವಾಣಿವಿಲಾಸ ಸಾಗರದ ಒಡಲು ಸೇರಿದ ನಂತರ ಸುಸ್ಥಿರ ಕೃಷಿ ಕನಸು ಬಿತ್ತಿದ್ದು, ಅಂತರ್ಜಲ ವೃದ್ಧಿ, ಜನ-ಜಾನುವಾರುಗಳ ಕುಡಿಯುವ ನೀರು, ನೀರಾವರಿ ಯೋಜನೆ ಅನುಷ್ಟಾನಕ್ಕೆ ಕೃಷಿಕರಿಗೆ ವರದಾನವಾಗಿದೆ ಎಂಬುದಾಗಿ ಜಿಲ್ಲಾ ಸಚಿವರು ಮುಖ್ಯಮಂತ್ರಿಗಳಿಗೆ ಮನವರಿಕೆ ಮಾಡಿದ್ದಾರೆ.

ಸಂಕ್ರಾತಿ ನಂತರ ಆಗಮಿಸಲು ಮುಖ್ಯಮಂತ್ರಿ ಸಿದ್ಧರಾಮಯ್ಯ ರವರು ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಶೀಘ್ರ ಡಿ.ಸಿ.ಎಂ.ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿ ಅಹ್ವಾನ ನೀಡಲಾಗುವುದು ಎಂಬುದಾಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಸುಧಾಕರ್ ರವರು ಹೇಳಿದ್ದಾರೆ.

Edited By : PublicNext Desk
Kshetra Samachara

Kshetra Samachara

08/01/2025 07:31 am

Cinque Terre

920

Cinque Terre

0

ಸಂಬಂಧಿತ ಸುದ್ದಿ