ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ನಕ್ಸಲರ ಶರಣಾಗತಿ ನಾಗರಿಕ ಸಮಾಜವನ್ನು ಬೆಚ್ಚಿಬೀಳಿಸಿದೆ - ಸುನಿಲ್ ಕುಮಾರ್ ಆಕ್ಷೇಪ

ಉಡುಪಿ: ಆರು ಮಂದಿ ನಕ್ಸಲರಿಗೆ ರಾಜ್ಯ ಸರ್ಕಾರ ಶರಣಾಗತಿ ಪ್ಯಾಕೇಜ್ ನೀಡುತ್ತಿರುವುದು ನಾಗರಿಕ ಸಮಾಜವನ್ನು ಬೆಚ್ಚಿಬೀಳಿಸಿದೆ.ಯಾವ ಮಾನದಂಡದ ಮೇಲೆ ಸರ್ಕಾರ ಈ ಕ್ರಮಕ್ಕೆ ಮುಂದಾಗಿದೆ ? ಎಂಬುದನ್ನು ಸ್ಪಷ್ಟಪಡಿಸಬೇಕು. ಸಿದ್ದರಾಮಯ್ಯ ಅಧಿಕಾರಕ್ಕೆ ಬಂದಾಗೆಲಲ್ಲ ನಕ್ಸಲರಿಗೆ - ಉಗ್ರರಿಗೆ ಸುಗ್ಗಿ. ಅವರಿಗೆ ಕ್ಷಮೆ, ಪ್ರಕರಣ ರದ್ದು, ಸುಖ-ಸೌಕರ್ಯ ಎಲ್ಲವೂ !

ರಾಷ್ಟ್ರಕವಿ ಕುವೆಂಪು ಅವರ ಕರ್ಮಭೂಮಿಯೂ ಆಗಿದ್ದ ತಣ್ಣಗಿನ ಮಲೆನಾಡು ಭಾಗದಲ್ಲಿ ಬಂದೂಕಿನ ಮೊರೆತ ಕೇಳಿಸಿದ ನಕ್ಸಲರಿಗೆ ಕ್ಷಮೆ ಕೊಟ್ಟು ಅವರನ್ನು ನಗರ ನಕ್ಸಲರಾಗಿಸಿ ಬುಡಮೇಲು ಕೃತ್ಯಕ್ಕೆ ಲೈಸೆನ್ಸ್ ಕೊಡುತ್ತೀರಾ ಸಿದ್ದರಾಮಯ್ಯನವರೇ ? ಇದರಿಂದ ಪೊಲೀಸರ ಆತ್ಮ ಸ್ಥೈರ್ಯ ಏನಾಗಬೇಡ ? ಈ ಶರಣಾಗತಿ ಪ್ರಹಸನವೇ ಅನುಮಾನಾಸ್ಪದವಾಗಿದೆ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ವಿ. ಸುನಿಲ್‌ ಕುಮಾರ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Edited By : PublicNext Desk
Kshetra Samachara

Kshetra Samachara

08/01/2025 10:36 am

Cinque Terre

27.84 K

Cinque Terre

1