ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೀದರ್: ಸಣ್ಣ ನೀರಾವರಿ ಇಲಾಖೆಯ ಇಂಜಿನಿಯರ್ ಮನೆಯ ಮೇಲೆ ಧೀದಿರ್ ಲೋಕಾಯುಕ್ತ ದಾಳಿ

ಬೀದರ್ : ಜಿಲ್ಲೆಯ ಸಣ್ಣ ನೀರಾವರಿ ಇಲಾಖೆಯ ಇಂಜಿನಿಯರ್ ರವೀಂದ್ರ ಅವರ ಮನೆ ಮೇಲೆ ಲೋಕಾಯುಕ್ತ ಅಧಿಕಅರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಆದಾಯಕ್ಕಿಂತ ಹೆಚ್ಚಿನ ಗಳಿಕೆ

ಆರೋಪ ಹಿನ್ನೆಲೆ ಲೋಕಾಯುಕ್ತ ಡಿವೈಎಸ್‌ಪಿ ಹನುಮಂತರಾಯ ನೇತೃತ್ವದಲ್ಲಿ 3 ತಂಡ ರಚಿಸಿ ಬುಧವಾರ ಬೆಳ್ಳಂ ಬೆಳಿಗ್ಗೆ ಮೂರು ಕಡೆ ದಾಳಿ ನಡೆಸಲಾಗಿದೆ.

ಬಸವಕಲ್ಯಾಣ ಸಣ್ಣ ನೀರಾವರಿ ಇಲಾಖೆಯ ಎಇ ರವೀಂದ್ರ ಅವರ ಬೀದರ್ ನ ಚಿಕ್ಕಪೇಟ್ ಹಾಗೂ ಭಾಲ್ಕಿ ತಾಲೂಕಿನ ಡೋಣಗಾಪುರ ಗ್ರಾಮದಲ್ಲಿರುವ ಮನೆ ಸೇರಿ ಅವರ ಕಚೇರಿಯ ಮೇಲೆಯೂ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಡುತ್ತಿದ್ದಾರೆ ಎಂದು ತಿಳಿದು ಬಂದಿದೆ.

Edited By : PublicNext Desk
Kshetra Samachara

Kshetra Samachara

08/01/2025 11:23 am

Cinque Terre

4 K

Cinque Terre

0