ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಲ್ಪೆ: ಮೀನುಗಾರಿಕಾ ಬೋಟ್‌ಗೆ ಮರದ ದಿಮ್ಮಿ ಡಿಕ್ಕಿ, ಅಪಾರ ಹಾನಿ ,ಲಕ್ಷಾಂತರ ರೂ.ನಷ್ಟ

ಮಲ್ಪೆ: ದುರಸ್ತಿಗೆಂದು ಹೋಗಿದ್ದ ಮಲ್ಪೆ ಬಂದರಿನ ಮೀನುಗಾರಿಕಾ ಬೋಟಿಗೆ ಗಂಗೊಳ್ಳಿ ಅಳಿವೆ ಸಮೀಪ ಮರದ ದಿಮ್ಮಿ ಡಿಕ್ಕಿ ಹೊಡೆದ ಪರಿಣಾಮ ಬೋಟ್‌ ಭಾಗಶಃ ಮುಳುಗಡೆಗೊಂಡು ಅಪಾರ ನಷ್ಟ ಉಂಟಾದ ಘಟನೆ ಸಂಭವಿಸಿದೆ. ತವಕಲ್‌ ಎನ್ನುವ ಹೆಸರಿನ ಮೀನುಗಾರಿಕೆ ಬೋಟನ್ನು ದುರಸ್ತಿಗೆಂದು ಮೀನುಗಾರರಾದ ರವಿ ಸಾಲ್ಯಾನ್‌ ಮತ್ತು ಹರೀಶ್‌ ಅವರು ಮಲ್ಪೆ ಬಂದರಿನಿಂದ ಗಂಗೊಳ್ಳಿಗೆ ಕೊಂಡು ಹೋಗುತ್ತಿದ್ದರು.

ಗಂಗೊಳ್ಳಿ ಬಂದರಿನ ಅಳಿವೆಯಿಂದ ಸುಮಾರು 2 ನಾಟಿಕಲ್‌ ಮೈಲು ದೂರದಲ್ಲಿ ಚಲಿಸುತ್ತಿರುವಾಗ ರಾತ್ರಿ 7.30ರ ವೇಳೆಗೆ ದೊಡ್ಡದಾದ ಮರದ ದಿಮ್ಮಿ ಬಂದು ಬೋಟಿಗೆ ಡಿಕ್ಕಿ ಹೊಡೆದಿದೆ.ಪರಿಣಾಮ ಬೋಟಿನ ಮುಂಭಾಗದ ತಳಬದಿಯಲ್ಲಿ ಹಾನಿಯಾಗಿ ನೀರು ಒಳ ಬರಲು ಪ್ರಾರಂಭಿಸಿತ್ತು. ನೀರಿನ ಒಳ ಹರಿವು ಜಾಸ್ತಿಯಾಗಿ ಬೋಟು ಮುಳುಗುವ ಸಂಭವ ಇರುವುದನ್ನು ಗಮನಿಸಿದ ಬೋಟಿನ ತಾಂಡೇಲ ರವಿ ಸಾಲ್ಯಾನ್‌ ಬೇರೆ ಬೋಟ್ ಗೆ ಮಾಹಿತಿ ನೀಡಿದರು‌.

ಜಲರಾಣಿ ಬೋಟಿನವರು ಮುಳುಗಡೆಗೊಳ್ಳುತ್ತಿದ್ದ ಬೋಟಿನಲ್ಲಿದ್ದ ರವಿ ಸಾಲ್ಯಾನ್‌ ಮತ್ತು ಹರೀಶ್‌ ಅವರನ್ನು ರಕ್ಷಣೆ ಮಾಡಿ ಬೋಟನ್ನು ತಮ್ಮ ಬೋಟಿಗೆ ಹಗ್ಗ ಕಟ್ಟಿ ಗಂಗೊಳ್ಳಿಗೆ ಎಳೆದು ತಂದಿದ್ದಾರೆ. ಬೋಟು ಹಾನಿಗೊಂಡಿದ್ದು, ಸುಮಾರು 65 ಲಕ್ಷ ರೂ. ನಷ್ಟ ಉಂಟಾಗಿದೆ ಎಂದು ಅಂದಾಜಿಸಲಾಗಿದೆ.

Edited By : Shivu K
Kshetra Samachara

Kshetra Samachara

08/01/2025 01:57 pm

Cinque Terre

3.59 K

Cinque Terre

0

ಸಂಬಂಧಿತ ಸುದ್ದಿ