ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಗದಗ: ಬೆಳ್ಳಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ

ಗದಗ: ಗದಗ ಬೆಟಗೇರಿ ನಗರಸಭೆ ಇಂಜಿನಿಯರ್‌ಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ಶಾಕ್ ನೀಡಿದ್ದಾರೆ. ಗದಗ ಬೆಟಗೇರಿ ನಗರಸಭೆ ಕಾರ್ಯನಿರ್ವಾಹಕ ಇಂಜಿನಿಯರ್ ಹುಚ್ಚೇಶ್ ಬಂಡಿವಡ್ಡರ್‌ಗೆ ಸೇರಿದ ಮನೆ, ಕಚೇರಿ ಮೇಲೆ ದಾಳಿ ನಡೆದಿದೆ. ಗದಗ, ಗಜೇಂದ್ರಗಡ, ಬಾಗಲಕೋಟೆ ಸೇರಿದಂತೆ ಒಟ್ಟು ಐದು ಕಡೆ ದಾಳಿ ನಡೆಸಲಾಗಿದೆ.

ಅಕ್ರಮ ಆಸ್ತಿಗಳಿಕೆ ಆರೋಪ ಹಿನ್ನೆಲೆ ಲೋಕಾಯುಕ್ತ ರೇಡ್ ಆಗಿದೆ. ಲೋಕಾಯುಕ್ತ ಅಧಿಕಾರಿಗಳಿಂದ ದಾಖಲೆ ಪರಿಶೀಲನೆ ನಡೆಯುತ್ತಿದೆ.

ಲೋಕಾಯುಕ್ತ ಎಸ್‌.ಪಿ ಹನಮಂತರಾಯ್, ಡಿವೈಎಸ್‌ಪಿ ವಿಜಯ್ ಬಿರಾದಾರ್, ಇನ್ಸ್‌ಪೆಕ್ಟರ್ ಪರಮೇಶ್ ಕವಟಗಿ ಸೇರಿದಂತೆ ಧಾರವಾಡ ಸಿಬ್ಬಂದಿಯಿಂದ ದಾಖಲೆ ಪರಿಶೀಲನೆ ನಡೆಸಲಾಗುತ್ತಿದೆ. ಪಿಎಸ್‌ಐ ಎಸ್.ಎಸ್ ತೇಲಿ ಸೇರಿದಂತೆ ಲೋಕಾಯುಕ್ತ ಸಿಬ್ಬಂದಿ ಭಾಗಿಯಾಗಿದ್ದಾರೆ.

Edited By : Shivu K
PublicNext

PublicNext

08/01/2025 02:08 pm

Cinque Terre

24.52 K

Cinque Terre

0

ಸಂಬಂಧಿತ ಸುದ್ದಿ