ಚಿತ್ರದುರ್ಗ: ಅವೈಜ್ಞಾನಿಕವಾಗಿ ಬಸ್ ಪ್ರಯಾಣ ದರವನ್ನು 15% ಏರಿಕೆ ಮಾಡಿರುವುದನ್ನು ಖಂಡಿಸಿ ಪ್ರತಿಭಟನೆ ನಡೆಸಿದ್ದಾರೆ.
ಚಿತ್ರದುರ್ಗ ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಜೆಡಿಎಸ್ ಪಕ್ಷದ ಕಾರ್ಯಕರ್ತರು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ಬಸ್ ದರವನ್ನು ಇಳಿಕೆ ಮಾಡಬೇಕೆಂದು ಪ್ರತಿಭಟಿಸಿದ್ದಾರೆ.
ರಾಜ್ಯ ಸರ್ಕಾರ ಅವೈಜ್ಞಾನಿಕ ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಜನಸಾಮಾನ್ಯರ ಮೇಲೆ ದರ ಹೆಚ್ಚಳದ ಹೊರೆ ಹೊರಿಸಿದೆ. ಸುಭದ್ರವಾಗಿದ್ದ ಕರ್ನಾಟಕದ ಆರ್ಥಿಕತೆಯನ್ನು ಹದಗೆಡೆಸಿರುವ ಸರ್ಕಾರ, ಸಾರಿಗೆ ಪ್ರಯಾಣ ದರವನ್ನು ಶೇ.15% ಹೆಚ್ಚಳ ಮಾಡಿ ಈಗ ಜನಸಾಮಾನ್ಯರ ಮೇಲೆ ಅನಗತ್ಯವಾಗಿ ಬೆಲೆ ಏರಿಕೆಯ ಬರೆ ಹಾಕುತ್ತಿದೆ.
ಗ್ಯಾರಂಟಿ ಯೋಜನೆಗಳಿಂದ ಸಾರಿಗೆ ಸಂಸ್ಥೆ ದಿವಾಳಿಯಾಗಿದ್ದು, ಈಗಾಗಲೇ ರಾಜ್ಯ ಸಾರಿಗೆ ಸಂಸ್ಥೆಗೆ 2,000 ಕೋಟಿ. ಸಾಲ ಪಡೆಯಲು ಸಚಿವ ಸಂಪುಟ ಅನುಮೋದನೆ ನೀಡಿದೆ. ಮಹಿಳೆಯರಿಗೆ ಉಚಿತ ಪ್ರಯಾಣ ನೀಡಿ, ಅದರ ನಷ್ಟವನ್ನು ಸರಿದೂಗಿಸಲು ದರ ಹೆಚ್ಚಿಸಿ ಪುರುಷ ಪ್ರಯಾಣಿಕರಿಂದ ವಸೂಲಿ ಮಾಡಲಾಗುತ್ತಿದೆ. ಸರ್ಕಾರ ಒಂದು ಕೈಯಲ್ಲಿ ಕೊಟ್ಟು, ಇನ್ನೊಂದು ಕೈಯಲ್ಲಿ ಕಸಿದು ಕೊಳ್ಳುತ್ತಿದೆ.
ರಾಜ್ಯ ಸರ್ಕಾರದ ಈ ತೀರ್ಮಾನ ಜನವಿರೋಧಿ ಮತ್ತು ಬಡವರ ವಿರೋಧಿ ಕ್ರಮವಾಗಿದೆ. ಬಸ್ ದರ ಏರಿಕೆಯನ್ನು ಈ ಕೂಡಲೇ ರಾಜ್ಯ ಸರ್ಕಾರ ಅವೈಜ್ಞಾನಿಕ ಬಸ್ ಪ್ರಯಾಣ ದರ ಏರಿಕೆಯನ್ನು ವಾಪಾಸ್ ಪಡೆಯಬೇಕೆಂದು ಆಗ್ರಹಿಸಿದ್ದಾರೆ.
Kshetra Samachara
08/01/2025 02:38 pm