ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ನಾಳೆ (ಜ.9) ಹುಬ್ಬಳ್ಳಿ - ಧಾರವಾಡ ಬಂದ್, ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಆಗುತ್ತಾ..?

ಹುಬ್ಬಳ್ಳಿ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವಹೇಳನಕಾರಿ ಹೇಳಿಕೆಯನ್ನು ಖಂಡಿಸಿ, ಸಾಕಷ್ಟು ಪ್ರಮಾಣದಲ್ಲಿ ಹೋರಾಟ ನಡೆಯುತ್ತಿವೆ. ಅದೇ ರೀತಿ ಕಾಂಗ್ರೆಸ್ ಪಕ್ಷಗಳು ಸೇರಿ ವಿವಿಧ ದಲಿತ ಸಂಘಟನೆಗಳು ನಾಳೆ (ಜ.9 ಕ್ಕೆ) ಇಡೀ ಹುಬ್ಬಳ್ಳಿ ಧಾರವಾಡ ಬಂದ್ ಮಾಡಲು ಕರೆ ಕೊಟ್ಟಿದ್ದು, ಈಗ ಆ ಬಂದ್ ಗೆ ಪರ ವಿರೋಧ ಚರ್ಚೆ ಆರಂಭವಾಗಿದೆ.

ಒಂದು ಕಡೆ ದಲಿತ ಸಂಘಟನೆಗಳು ಹೋರಾಟಕ್ಕೆ ಮುಂದಾದ್ರೆ ಇತ್ತ ಬಿಜೆಪಿ ಮುಖಂಡರು ಯಾವುದೇ ಕಾರಣಕ್ಕೂ ಹುಬ್ಬಳ್ಳಿ ಧಾರವಾಡ ಬಂದ್ ಮಾಡಲು ಯಾವುದೇ ರೀತಿಯ ಅನುಮತಿ ನೀಡಬಾರದೆಂದು ಒತ್ತಾಯ ಮಾಡ್ತಿದ್ದಾರೆ. ಆದ್ರೆ ಕಾಂಗ್ರೆಸ್ ಪಕ್ಷದ ಮಹಿಳಾ ಘಟಕದಿಂದ ಮಾಧ್ಯಮಗೋಷ್ಠಿ ಏರ್ಪಡಿಸಿ ನಾವು ಯಾವುದೇ ಕಾರಣಕ್ಕೂ ಗೊಡ್ಡು ಬೆದರಿಕೆಗೆ ಹೆದರೋದಿಲ್ಲ. ನಾವು ನಾಳೆ ಹುಬ್ಬಳ್ಳಿ ಧಾರವಾಡ ಬಂದ್ ಮಾಡೇ ಮಾಡುತ್ತೇವೆ ಎಂದು ಪಣ ತೊಟ್ಟಿದ್ದಾರೆ. ನಿನ್ನೆ ದಿನದಂದು ಶಾಸಕ ಅರವಿಂದ ಬೆಲ್ಲದ್ ನೇತೃತ್ವದಲ್ಲಿ ಮಾಧ್ಯಮಗೋಷ್ಠಿ ಮಾಡಿ ಹುಬ್ಬಳ್ಳಿ ಧಾರವಾಡ ಬಂದ್ ಮಾಡುವ ಅವಶ್ಯಕತೆ ಇಲ್ಲ. ದಲಿತರನ್ನು ಮುಂದಿಟ್ಟುಕೊಂಡು ಕಾಂಗ್ರೆಸ್ ಪಕ್ಷ ಹೋರಾಟ ಮಾಡ್ತಿದೆ ಎಂದು ಹೇಳಿಕೆ ನೀಡಿದ್ದರು. ಇಂದು ಕಾಂಗ್ರೆಸ್ ಮಹಿಳಾ ಘಟಕದಿಂದ ನಾಳೆ ದಿನ ಬಂದ್ ಮಾಡಲು ಎಲ್ಲರಿಗೂ ಒಪ್ಪಿಗೆ ಇದೆ. ನಮ್ಮ ಹೋರಾಟಕ್ಕೆ ಬಿಜೆಪಿ ಅಡ್ಡಗಾಲು ಹಾಕುತ್ತಿದ್ದಾರೆ. ನಾವು ಯಾವುದೇ ಕಾರಣಕ್ಕೂ ಹೋರಾಟ ನಿಲ್ಲಿಸುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಇನ್ನು ಈ ಬಂದ್ ಕರೆಗೆ ಪರವಿರೋಧ ಆರಂಭವಾದ್ರೆ ಈ ಎರಡು ಪಕ್ಷಗಳ ಕಚ್ಚಾಟದಿಂದ ಸಾರ್ವಜನಿಕರು ಗೊಂದಲಕ್ಕೀಡಾಗಿದ್ದಾರೆ. ನಾಳೆ ಬಂದ್‌ನಲ್ಲಿ ಶಾಲಾ ಕಾಲೇಜುಗಳಿಗೆ, ಸರ್ಕಾರಿ ಕಚೇರಿಗಳಿಗೆ ರಜೆ ಘೋಷಣೆ ಆಗಿದೆಯಾ ಎಂಬ ಪ್ರಶ್ನೆ ಎಲ್ಲರಲ್ಲೂ ಮೂಡುತ್ತಿದೆ. ಇದಕ್ಕೆ ಜಿಲ್ಲಾಡಳಿತ ಸೂಕ್ತ ಸೂಚನೆ ನೀಡಬೇಕಾಗಿದೆ.

ಈರಣ್ಣ ವಾಲಿಕಾರ, ಪಬ್ಲಿಕ್ ನೆಕ್ಸ್ಟ್, ಹುಬ್ಬಳ್ಳಿ

Edited By : Manjunath H D
Kshetra Samachara

Kshetra Samachara

08/01/2025 03:22 pm

Cinque Terre

70.13 K

Cinque Terre

9

ಸಂಬಂಧಿತ ಸುದ್ದಿ