ಚಿತ್ರದುರ್ಗಜ.08 :ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಯುವನಿಧಿ ಯೋಜನೆಯು ಯುವ ಜನತೆಯ ಉಜ್ವಲ ಭವಿಷ್ಯಕ್ಕಾಗಿ ರೂಪಿಸಲಾಗಿದ್ದು, ಆರ್ಥಿಕ ಸಂಕಷ್ಟದ ನಡುವೆ ಉದ್ಯೋಗದ ಹುಡುಕಾಟದಲ್ಲಿರುವ ನಿರುದ್ಯೋಗಿ ಯುವ ಜನರು, ಯುವನಿಧಿ ಯೋಜನೆಗೆ ನೋಂದಾಯಿಸಿಕೊಳ್ಳುವ ಮೂಲಕ ಸದುಪಯೋಗ ಪಡೆಯಬೇಕು ಎಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಆರ್.ಶಿವಣ್ಣ ಹೇಳಿದರು.ನಗರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಹಾಗೂ ಜಿಲ್ಲಾ, ತಾಲ್ಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ವತಿಯಿಂದ ಏರ್ಪಡಿಸಿದ ಯುವನಿಧಿ ವಿಶೇಷ ನೋಂದಣಿ ಅಭಿಯಾನ ಹಾಗೂ ಪೋಸ್ಟರ್ ಬಿಡುಗಡೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
Kshetra Samachara
08/01/2025 03:23 pm