ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ದೆಹಲಿ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್‌ ಗ್ಯಾರಂಟಿ : ₹25 ಲಕ್ಷದವರೆಗೆ ಉಚಿತ ಆರೋಗ್ಯ ವಿಮೆ

ನವದೆಹಲಿ: ಮುಂಬರುವ ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ್ರೆ 'ಜೀವನ ರಕ್ಷ ಯೋಜನೆ'ಯಡಿ ₹25 ಲಕ್ಷದವರೆಗೆ ಉಚಿತ ಆರೋಗ್ಯ ವಿಮೆ ರಕ್ಷಣೆ ಒದಗಿಸುವುದಾಗಿ ಪಕ್ಷ ಘೋಷಿಸಿದೆ.

ಪ್ರತಿಕಾಗೋಷ್ಠಿಯಲ್ಲಿ ಮಾತನಾಡಿದ ರಾಜಸ್ಥಾನದ ಮಾಜಿ ಸಿಎಂ ಅಶೋಕ್ ಗೆಹಲೋತ್‌, 'ದೆಹಲಿಯಲ್ಲಿ ಕಾಂಗ್ರೆಸ್‌ ಸರ್ಕಾರ ರಚನೆಯಾಗುವ ಎಲ್ಲಾ ಸಾಧ್ಯತೆಗಳು ದಟ್ಟವಾಗಿದೆ ಎಂದು ಹೇಳಿದ್ದಾರೆ.

ಈ ಯೋಜನೆಯು ಗಂಭೀರ ಕಾಯಿಲೆಯಿಂದ ಬಳಲುತ್ತಿರುವವರು ಸೇರಿದಂತೆ ಇತರೆ ಆರೋಗ್ಯ ಸಮಸ್ಯೆಗಳ ಚಿಕಿತ್ಸಾ ವೆಚ್ಚವನ್ನು ಒಳಗೊಂಡಿರುತ್ತದೆ. ಕಾಂಗ್ರೆಸ್‌ ಘೋಷಿಸಿರುವ ಎಲ್ಲಾ ಯೋಜನೆಗಳು ಜನರ ಅಗತ್ಯತೆಗಳನ್ನು ಪೂರ್ಣಗೊಳಿಸಲು ಪಕ್ಷ ಬದ್ಧವಾಗಿದೆ ಎಂದು ಗೆಹಲೋತ್‌ ಹೇಳಿದ್ದಾರೆ.

ದೆಹಲಿ ವಿಧಾನಸಭೆಗೆ ಫೆಬ್ರುವರಿ 5ರಂದು ಮತದಾನ ನಡೆಯಲಿದ್ದು, ಫೆಬ್ರುವರಿ 8ರಂದು ಮತ ಎಣಿಕೆ ನಡೆಯಲಿದೆ.

Edited By : Abhishek Kamoji
PublicNext

PublicNext

08/01/2025 03:30 pm

Cinque Terre

31.06 K

Cinque Terre

0

ಸಂಬಂಧಿತ ಸುದ್ದಿ