ಬೆಳಗಾವಿ: ಬಾಂಗ್ಲಾದೇಶದಲ್ಲಿ ಇಸ್ಕಾನ್ ನ ಶ್ರೀ ಚಿನ್ಮಯಕೃಷ್ಣದಾಸ ಸ್ವಾಮಿಜೀಯವರನ್ನು ಬಂಧಿಸಲಾಗಿದ್ದು, ಅವರನ್ನು ಕೂಡಲೇ ಬಿಡುಗಡೆಗೊಳಿಸಬೇಕೆಂದು ಒತ್ತಾಯಿಸಿ ಬೆಳಗಾವಿಯಲ್ಲಿ ನಾಗರಿಕ ಹಿತರಕ್ಷಣಾ ಸಮಿತಿ ಮತ್ತು ಇಸ್ಕಾನ್ ವತಿಯಿಂದ ಹಿಂದೂ ಜನಾಕ್ರೋಶ ಮೋರ್ಚಾ ಹಮ್ಮಿಕೊಳ್ಳಲಾಗಿತ್ತು.
ಇಂದು ಬೆಳಗಾವಿ ನಗರದ ಧರ್ಮವೀರ ಛತ್ರಪತಿ ಸಂಭಾಜಿ ಮಹಾರಾಜರ ವೃತ್ತದಲ್ಲಿ ನಾಗರಿಕ ಹಿತರಕ್ಷಣಾ ಸಮಿತಿ ಮತ್ತು ಇಸ್ಕಾನ್ ವತಿಯಿಂದ ಪ್ರತಿಭಟನೆಯನ್ನು ನಡೆಸಿ ಬಾಂಗ್ಲಾದೇಶದಲ್ಲಿ ಇಸ್ಕಾನ್ ನ ಶ್ರೀ ಚಿನ್ಮಯಕೃಷ್ಣದಾಸ ಸ್ವಾಮೀಜಿಯವರನ್ನು ಕೂಡಲೇ ಬಿಡುಗಡೆಗೊಳಿಸಲು ಆಗ್ರಹಿಸಲಾಯಿತು.
ಬಾಂಗ್ಲಾದೇಶದಲ್ಲಿ ಶ್ರೀ ಚಿನ್ಮಯಕೃಷ್ಣದಾಸ ಸ್ವಾಮೀಜಿಯವರನ್ನು ಬಂಧಿಸಲಾಗಿದೆ. ಅಲ್ಲದೇ ಅಲ್ಲಿನ ಮಂದಿರಗಳನ್ನು ಧ್ವಂಸಗೊಳಿಸಲಾಗಿದೆ. ಮಹಿಳೆಯರ ಮೇಲೆ ಅತ್ಯಾಚಾರಗಳು ನಡೆಯುತ್ತಿವೆ. ನಿರಂತರವಾಗಿ ಹಿಂದೂಗಳ ಕಗ್ಗೊಲೆ ನಡೆಯುತ್ತಿರುವುದನ್ನು ಖಂಡಿಸಿ ಪ್ರತಿಭಟನೆಯನ್ನು ನಡೆಸಲಾಯಿತು. ಬಳಿಕ ಬೆಳಗಾವಿಯ ಉಪವಿಭಾಗಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
Kshetra Samachara
08/01/2025 03:54 pm