ಬೆಂಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿ ಡಿನ್ನರ್ ಪಾಲಿಟಿಕ್ಸ್ ಜೋರಾಗಿ ಸದ್ದು ಮಾಡುತ್ತಿದೆ. ಇದರ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್ ಶಾಸಕಾಂಗ ಸಭೆ ಕರೆದಿದ್ದಾರೆ. ಜನವರಿ 13 ಸೋಮವಾರ ಸಂಜೆ 6 ಗಂಟೆಗೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಶಾಸಕಾಂಗ ಸಭೆ ನಡೆಯಲಿದೆ. ವಿಇದು ಶೇಷ ಪರಿಸ್ಥಿತಿಯಲ್ಲಿ ಕರೆಯಲಾಗಿರುವ ಕೈ ಶಾಸಕಾಂಗ ಸಭೆ. ಆದ್ರೆ ಈಗ ಹೀಗೆ ದಿಢೀರಾಗಿ ವಿಧಾನಮಂಡಲ ಅಧಿವೇಶನ ಮುಗಿದ ಬಳಿಕ ಕರೆಯಲಾಗುತ್ತಿರುವ ಸಿಎಲ್‌ಪಿ ಮೀಟಿಂಗ್ ಕರೆದಿರುವುದು ಕುತೂಹಲಕ್ಕೆ ಕಾರಣವಾಗಿದೆ.
ಕಳೆದ ವಾರ ಡಿಕೆ ಶಿವಕುಮಾರ್ ಅವರು ರಾಜ್ಯದಲ್ಲಿ ಇಲ್ಲದಿರುವಾಗ ಸಚಿವ ಸತೀಶ್ ಜಾರಕಿಹೊಳಿ ನಿವಾಸದಲ್ಲಿ ಡಿನ್ನರ್ ಮೀಟಿಂಗ್ ನಡೆದಿತ್ತು. ಆ ಡಿನ್ನರ್ ಮೀಟಿಂಗ್‌ನಲ್ಲಿ ಕೇವಲ ಸಿದ್ದರಾಮಯ್ಯ ಆಪ್ತ ಬಣದ ಸಚಿವರು ಮತ್ತು ಶಾಸಕರು ಮಾತ್ರ ಭಾಗಿಯಾಗಿದ್ದರು. ಇದರ ಬೆನ್ನಲ್ಲೇ ಗೃಹ ಸಚಿವ ಪರಮೇಶ್ವರ್ ಸಹ ಡಿನ್ನರ್ ಮೀಟಿಂಗ್ ಕರೆದಿದ್ದರು. ಆದ್ರೆ ಇದಕ್ಕೆ ಕಾಂಗ್ರೆಸ್ ಹೈಕಮಾಂಡ್ ಮಧ್ಯಪ್ರವೇಶಿಸಿ ಪರಮೇಶ್ವರ್ ಕರೆದಿದ್ದ ಡಿನ್ನರ್ ಮೀಟಿಂಗ್‌ಗೆ ಬ್ರೇಕ್ ಹಾಕಲಾಗಿದೆ. ಇದೇ ವಿಚಾರ ಈಗ ಕಾಂಗ್ರೆಸ್ ಪಕ್ಷದಲ್ಲಿ ಜೋರ್ ಚರ್ಚೆಯಾಗುತ್ತದೆ. ಡಿನ್ನರ್ ಮೀಟಿಂಗ್ ಯಾಕೆ ಮಾಡಿದ್ರು ಯಾಕೆ ರದ್ದಾಯಿತು. ಇದರ ನಡುವೆ ಸಿಎಂ ಸಿದ್ದರಾಮಯ್ಯ ಸೋಮವಾರ ಸಂಜೆ ದಿಢೀರಾಗಿ ಶಾಸಕಾಂಗ ಪಕ್ಷದ ಸಭೆ ಕರೆದಿರುವುದು ಸಾಕಷ್ಟು ಕುತೂಹಲ ಮೂಡಿಸಿದೆ.
PublicNext
08/01/2025 05:04 pm