ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ನಗರದ ಅಭಿವೃದ್ಧಿ - ಸಮಸ್ಯೆ ಬಗ್ಗೆ ಶಾಸಕರು, ನಗರಸಭೆ ಅಧ್ಯಕ್ಷರೊಂದಿಗೆ ಪತ್ರಕರ್ತಕರ ಸಂವಾದ

ಉಡುಪಿ: ಉಡುಪಿ ನಗರದ ಸಮಗ್ರ ಅಭಿವೃದ್ಧಿಗಾಗಿ ಶ್ರೀಕೃಷ್ಣ ಕಾರಿಡಾರ್ ಎಂಬ ಕಾರ್ಯಯೋಜನೆ ರೂಪಿಸಲಾಗುತ್ತಿದೆ. ಈ ಮೂಲಕ ನಗರದಲ್ಲಿ ಫ್ಲೈ ಓವರ್, ರಿಂಗ್‌ರೋಡ್, ಟ್ರಾಫಿಕ್ ಸಂಚಾರ, ಸಿಸಿಟಿವಿಗಳು, ಪಾರ್ಕಿಂಗ್ ವ್ಯವಸ್ಥೆಗಳನ್ನು ಮಾಡಲಾಗುವುದು. ಇದಕ್ಕಾಗಿ ಪ್ರಧಾನ ಮಂತ್ರಿಗೆ 300ಕೋಟಿ ರೂ. ವೆಚ್ಚದ ಪ್ರಸ್ತಾಪವನ್ನು ಸಲ್ಲಿಸಲು ಉದ್ದೇಶಿಸಲಾಗಿದೆ ಎಂದು ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ತಿಳಿಸಿದ್ದಾರೆ.

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಉಡುಪಿ ಪತ್ರಿಕಾ ಭವನ ಸಮಿತಿಯ ಸಹಯೋಗದೊಂದಿಗೆ ನಗರದ ಸಮಸ್ಯೆ ಮತ್ತು ಅಭಿವೃದ್ಧಿ ಯೋಜನೆ ಕುರಿತು ಬುಧವಾರ ಉಡುಪಿ ಪತ್ರಿಕಾ ಭವನದಲ್ಲಿ ಆಯೋಜಿಸಲಾದ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡುತ್ತಿದ್ದರು.

ನಗರದಲ್ಲಿ ಸುಮಾರು 2 ಲಕ್ಷಕ್ಕೂ ಅಧಿಕ ಜನಸಂಖ್ಯೆಯಿದ್ದು, ಕುಡಿಯುವ ನೀರು ಸಹಿತ ಒಳಚರಂಡಿ ಕಾಮಗಾರಿಗೆ ಆದ್ಯತೆ ನೀಡಲಾಗುತ್ತಿದೆ. ಈಗಾಗಲೇ 400 ಕೋಟಿ ರೂ. ವೆಚ್ಚದಲ್ಲಿ ಡಿಪಿಆರ್ ಸಿದ್ಧಪಡಿಸಲಾಗಿದ್ದು, ಇದನ್ನು ವೈಜ್ಞಾನಿಕ ರೀತಿಯಲ್ಲಿ ಮಾಡಲು ಸುಮಾರು 700-800 ಕೋಟಿ ರೂ. ಅನುದಾನ ಅಗತ್ಯವಿದೆ ಎಂದರು.

ವಾರಾಹಿ ಯೋಜನೆ ಕಾಮಗಾರಿ ಅಂತಿಮ ಹಂತದಲ್ಲಿದ್ದು, ಪರೀಕ್ಷೆ ಸಂದರ್ಭದಲ್ಲಿ ಲೀಕೇಜ್‌ಗಳನ್ನು ಪತ್ತೆ ಹಚ್ಚಲಾಗುತ್ತಿದೆ. ನಗರದ ಸಮಸ್ಯೆಗಳ ಬಗ್ಗೆ ಗಮನಹರಿಸುವ ನಿಟ್ಟಿನಲ್ಲಿ ತಿಂಗಳಲ್ಲಿ 2 ಬಾರಿ ಅದಾಲತ್ ಆಯೋಜಿಸ ಲಾಗುವುದು. ಆಟೋರಿಕ್ಷಾ ತಂಗುದಾಣಕ್ಕೆ ಸೂಕ್ತ ಮಾರ್ಗಸೂಚಿ ರಚನೆ, ಬೀದಿಬದಿ ಅಂಗಡಿಗಳಿಗೆ ಪ್ರತ್ಯೇಕ ರೆನ್, ಮಲ್ಟಿಲೆವಲ್ ಪಾರ್ಕಿಂಗ್‌ಗೆ ಸೂಕ್ತ ಕ್ರಮ ಒದಗಿಸಲಾಗುವುದು ಎಂದು ಅವರು ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಅಗಲಿದ ಸಂಘದ ಮಾಜಿ ಅಧ್ಯಕ್ಷ ಜಯಕರ ಸುವರ್ಣ ಅವರ ಕುಟುಂಬಕ್ಕೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ, ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಉಡುಪಿ ಪತ್ರಿಕಾ ಭವನ ಸಮಿತಿಯಿಂದ ಸಹಾಯಧನದ ಚೆಕ್ ವಿತರಿಸಲಾಯಿತು. ರಾಜ್ಯ ಸಂಘದಿಂದ ನೀಡಲಾದ ಪತ್ರಿಭಾ ಪುರಸ್ಕಾರದ ಚೆಕ್ ಅನ್ನು ಸಂಘದ ಸದಸ್ಯರ ಮಕ್ಕಳಿಗೆ ಹಸ್ತಾಂತರಿಸಲಾಯಿತು.

Edited By : PublicNext Desk
Kshetra Samachara

Kshetra Samachara

08/01/2025 05:07 pm

Cinque Terre

1.12 K

Cinque Terre

0

ಸಂಬಂಧಿತ ಸುದ್ದಿ