ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೊಡಗಿನ ಕಬಡ್ಡಿ ಆಟಗಾರರಿಗೆ ಅನ್ಯಾಯ - ಆರೋಪ

ಮಡಿಕೇರಿ: ದೊಡ್ಡಬಳ್ಳಾಪುರದಲ್ಲಿ ಇತ್ತೀಚೆಗೆ ನಡೆದ ರಾಜ್ಯ ಮಟ್ಟದ ಕಬಡ್ಡಿ ಚಾಂಪಿಯನ್ ಶಿಪ್ ಪಂದ್ಯಾವಳಿಯಲ್ಲಿ ಕೊಡಗು ಜಿಲ್ಲೆಯ ನೈಜ ಪ್ರತಿಭಾನ್ವಿತ ಕಬಡ್ಡಿ ಆಟಗಾರರಿಗೆ ಆಟವಾಡಲು ಅವಕಾಶ ನೀಡದೆ ಅನ್ಯಾಯ ಮಾಡಲಾಗಿದೆ ಎಂದು ಕುಶಾಲನಗರ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ ಅಧ್ಯಕ್ಷ ಎಸ್.ಆದಂ ಹಾಗೂ ಕಬಡ್ಡಿ ಆಟಗಾರರು ಆರೋಪಿಸಿದ್ದಾರೆ.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಸ್.ಆದಂ ಕರ್ನಾಟಕ ರಾಜ್ಯ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ವತಿಯಿಂದ ಜನವರಿ 6ರಿಂದ 8 ರವರೆಗೆ ದೊಡ್ಡಬಳ್ಳಾಪುರದಲ್ಲಿ ರಾಜ್ಯ ಮಟ್ಟದ ಕಬಡ್ಡಿ ಚಾಂಪಿಯನ್ ಶಿಪ್ ಪಂದ್ಯಾವಳಿ ನಡೆದಿದೆ. ಈ ಪಂದ್ಯಾವಳಿಯಲ್ಲಿ ಪಾಲ್ಗೊಳ್ಳಲು ಕೊಡಗಿನ ಪ್ರತಿಭಾವಂತ ಕಬಡ್ಡಿ ಆಟಗಾರರು ಉತ್ಸುಕರಾಗಿದ್ದರು.

ಆದರೆ ಆಟಗಾರರ ಆಯ್ಕೆಯು ನಿಯಮಬಾಹಿರವಾಗಿ ನಡೆದಿರುವುದರಿಂದ ಸ್ಥಳೀಯ ಆಟಗಾರರಿಗೆ ಅನ್ಯಾಯವಾಗಿದೆ. ಕೊಡಗಿನ ಆಸಕ್ತ ಆಟಗಾರರು ಕುಶಾಲನಗರದ ಜ್ಞಾನ ಭಾರತಿ ಶಾಲಾ ಮೈದಾನಕ್ಕೆ ತೆರಳಿ ಕೊಡಗು ಜಿಲ್ಲೆಯ ಕಬಡ್ಡಿ ಅಸೋಸಿಯೇಷನ್ ನಡೆಸಿದ ಆಯ್ಕೆ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದರು. ಆದರೆ ಉತ್ತಮವಾಗಿ ಆಟವಾಡುವ ಆಟಗಾರರನ್ನು ಆಯ್ಕೆ ಮಾಡದೆ ಮತ್ತು ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸದ ಆಟಗಾರರನ್ನು ನಿಯಮಬಾಹಿರವಾಗಿ ಕೊಡಗು ತಂಡದ ಆಟಗಾರರೆಂದು ಪ್ರತಿಬಿಂಬಿಸಿ ದೊಡ್ಡಬಳ್ಳಾಪುರಕ್ಕೆ ಕರೆದುಕೊಂಡು ಹೋಗಿ ಆಟವಾಡಿಸಿದ್ದಾರೆ ಎಂದು ಆರೋಪಿಸಿದರು.

Edited By : PublicNext Desk
PublicNext

PublicNext

08/01/2025 06:07 pm

Cinque Terre

25.08 K

Cinque Terre

0