ಹಾಸನ: ವಿಧಾನಸಭಾ ಕ್ಷೇತ್ರ ವ್ತಾಪ್ತಿಗೆ ಒಳಪಡುವ ಅಗಲಹಳ್ಳಿ ಗ್ರಾಮದಲ್ಲಿ ಇಂದು ವಿವೇಕ ಯೋಜನೆ ಅಡಿಯಲ್ಲಿ 27.80 ಲಕ್ಷ ರೂ ಅನುದಾನದಲ್ಲಿ ನೂತನವಾಗಿ ನಿರ್ಮಾಣ ಮಾಡಿರುವ 2 ಕೊಠಡಿಗಳನ್ನು ಶಾಸಕ ಸ್ವರೂಪ್ ಪ್ರಕಾಶ್ ಉದ್ಘಾಟಿಸಿದರು.
ಕೊಠಡಿ ಉದ್ಘಾಟನೆಗೂ ಮುನ್ನ ಗ್ರಾಮದ ಶ್ರೀ ಆಂಜನೇಯ ಸ್ವಾಮಿ ದೇವಾಲಯದಲ್ಲಿ ಪೂಜೆ ಸಲ್ಲಿಸಿದರು. ಈ ವೇಳೆ ಗ್ರಾಮದ ಮುಖಂಡರು ಹಾಗೂ ಅಧಿಕಾರಿಗಳು ಸ್ವರೂಪ್ ಅವರಿಗೆ ಸಾಥ್ ನೀಡಿದರು.
ಬಳಿಕ ಮಾತನಾಡಿದ ಅವರು, ಕಳೆದ ಅನೇಕ ವರ್ಷಗಳಿಂದ ಶಾಲೆಯಲ್ಲಿ ಕೊಠಡಿ ಕೊರತೆ ಮನಗಂಡು ನೂತನ ಕೊಠಡಿ ನಿರ್ಮಿಸಿಕೊಡಲಾಗಿದೆ. ವಿದ್ಯಾರ್ಥಿಗಳ ಅನುಕೂಲಕ್ಕೆ ತಮ್ಮ ಕ್ಷೇತ್ರದ ವ್ಯಾಪ್ತಿಯಲ್ಲಿ ಏನೆಲ್ಲಾ ಸಮಸ್ಯೆಗಳಿವೆ ಅವುಗಳನ್ನು ನಿವಾರಿಸುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಲಾಗುತ್ತಿದೆ ಎಂದರು.
Kshetra Samachara
08/01/2025 06:09 pm