ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹಾಸನ: ಅಮಿತ್ ಶಾ ಹೇಳಿಕೆಗೆ ಸಿಡಿದೆದ್ದ ದಲಿತ ಸಂಘನೆಗಳು - ರಾಷ್ಟ್ರೀಯ ಹೆದ್ದಾರಿ ತಡೆದು ಆಕ್ರೋಶ

ಹಾಸನ: ಬಾಬಾ ಸಾಹೇಬ್ ಅಂಬೇಡ್ಕರ್ ಅವರ ವಿರುದ್ಧ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆ ಖಂಡಿಸಿ ಹಾಸನದ ಭುವನಹಳ್ಳಿ ಬೈಪಾಸ್ ಬಳಿ ವಿವಿಧ ದಲಿತ ಪರ ಸಂಘಟನೆಗಳು ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸುವ ಮೂಲಕ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರನ್ನು ಸಚಿವ ಸಂಪುಟದಿಂದ ವಜಾ ಗೊಳಿಸಬೇಕು ಎಂದು ಆಗ್ರಹಿಸಿ ಕೇಂದ್ರ ಬಿಜೆಪಿ ಹಾಗೂ ಗೃಹ ಸಚಿವ ಅಮಿತ್ ಷಾ ವಿರುದ್ಧ ಘೋಷಣೆ ಕೂಗುವ ಮೂಲಕ ಅಮಿತ್ ಶಾ ರಾಜಿನಾಮೆಗೆ ಪ್ರತಿಭಟನಾಕಾರರು ಆಗ್ರಹಿಸಿದರು. ಈ ವೇಳೆ ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದರು.

ರಸ್ತೆ ತಡೆಗೂ ಮುನ್ನ ಬಹಿರಂಗ ಸಭೆ ನಡೆಸಿ ಮಾತನಾಡಿದ ಪ್ರತಿಭಟನಕಾರರು, ಬಾಬಾಸಾಹೇಬ್ ಅಂಬೇಡ್ಕರ್ ಅವರ ಬಗೆ ಸಂಸತ್ ನಲ್ಲಿ ವ್ಯಂಗ್ಯವಾಗಿ ಮಾತನಾಡುವ ಜೊತೆಗೆ ಅಂಬೇಡ್ಕರ್ ಬಗ್ಗೆ ಮಾತನಾಡುವ ಬದಲು ದೇವರ ನಾಮ ಜಪ ಮಾಡಿದ್ದರೆ ಮೋಕ್ಷ ಸಿಗುತ್ತಿತ್ತು ಎಂಬ ಮಾತನ್ನು ಹೇಳುವ ಮೂಲಕ ಅಂಬೇಡ್ಕರ್ ಅವರಿಗೆ ಶಾ ಅಪಾಮನ ಮಾಡಿದ್ದಾರೆ ಅವರ ಸಂವಿಧಾನದ ಆಧಾರದ ಮೇಲೆ ಸಚಿವರಾಗಿರುವ ಶಾ ಅವರು ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೆಡಬೇಕು ಎಂದು ಆಗ್ರಹಿಸಿದರು.

Edited By : PublicNext Desk
Kshetra Samachara

Kshetra Samachara

08/01/2025 06:15 pm

Cinque Terre

480

Cinque Terre

0